ವಿವಿಧ ಬೇಡಿಕೆ: ಇಂದು ನೌಕರರಿಂದ ಪ್ರತಿಭಟನೆ
ಹಿರೇಕೆರೂರು: ಅನುದಾನಿತ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನ. 23ರಂದು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ತಹಸೀಲ್ದಾರ್ ಮುಖಾಂತರ ಮನವಿ ಸಲ್ಲಿಸಲಾಗುವುದು ಎಂದು ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಬಿ. ಸಾವಜ್ಜಿಯವರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಂಘದ ಬೇಡಿಕೆಗಳಾದ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅನುದಾನರಹಿತ ಸೇವಾವಧಿಯ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಾಲಾ ನೌಕರರಿಗೆ ನೀಡಬೇಕು. 2006ರ ಡಿಸೆಂಬರ್ ನಂತರ ನೇಮಕವಾದ ಅನುದಾನಿತ ಸಿಬ್ಬಂದಿಗೆ ಸರ್ಕಾರಿ ನೌಕರರಿಗ ಜಾರಿಗೊಳಿಸಿದ ವಂತಿಗೆ ಪಿಂಚಣಿ ಸೌಲಭ್ಯ ಜಾರಿಗೊಳಿಸಬೇಕು. ಅನುದಾನಿತ ಸಂಸ್ಥೆಗಳಲ್ಲಿ 2013ರ ವರೆಗೆ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಜರುಗಿಸಬೇಕು. 2007ರ ವರ್ಗಾವಣೆ ನೀತಿಗೆ ತಿದ್ದುಪಡಿ ತರುವುದು ಮೊದಲಾದ ಬೇಡಿಕೆಗಳನ್ನು ಈಡೇರಿಕೆಗಾಗಿ ಮನವಿ ಸಲ್ಲಿಸಲಾಗುವುದು ಎಂದಿದ್ದಾರೆ. ಸರ್ಕಾರದ ಗಮನ ಸೆಳೆಯಲು ನ. 23ರಂದು ಹಿರೇಕೆರೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಏರ್ಪಡಿಸಲಾಗಿದ್ದು, ಮಧ್ಯಾಹ್ನ 2ಕ್ಕೆ ಪಟ್ಟಣದ ಗುರುಭವನದಿಂದ ಪ್ರತಿಭಟನಾ ಮೆರವಣಿಗೆ ಅರಂಭಗೊಳ್ಳಲಿದ್ದು, ಶಿಕ್ಷಕರು ಸಹಕರಿಸಲು ತಿಳಿಸಲಾಗಿದೆ.
--
ಕನಕದಾಸರು ನಾಡು ಕಂಡ ಮಹಾನ್ ಸಂತ: ಕುನ್ನೂರ
ಶಿಗ್ಗಾಂವಿ: ಕನಕದಾಸರು ಕರ್ನಾಟಕ ಕಂಡ ಮಹಾನ್ ಸಂತ. 15-16ನೇ ಶತಮಾನದ ಭಕ್ತಿಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ತಿಮ್ಮಪ್ಪನಾಯಕನಾಗಿ ವಿಜಯನಗರದ ಅರಸರ ಆಡಳಿತದಲ್ಲಿ ಬಂಕಾಪುರ ಪ್ರಾಂತ್ಯದ ಪಾಳೇಗಾರನಾಗಿದ್ದ ಈತ ಯುದ್ಧದಲ್ಲಾದ ಸಾವು ನೋವುಗಳಿಂದ ಬೇಸತ್ತು ಹರಿದಾಸನಾಗಿ ಜಗತ್ತಿನಲ್ಲಿ ಯುದ್ಧವೇ ಇರಬಾರದು ಎಂಬ ತೀರ್ಮಾನಕ್ಕೆ ಬಂದು ಕೃಷ್ಣ ನಾಮಸ್ಮರಣೆ ಮಾಡುತ್ತ ದೇವರನ್ನರಸಿ ಹೊರಟ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಸಂಸದ ಮಂಜುನಾಥ ಕುನ್ನೂರ ಹೇಳಿದರು. ಪಟ್ಟಣದ ಚನ್ನಪ್ಪ ಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ಕನಕ ಜಯಂತಿ ಉದ್ಘಾಟಿಸಿ ಮಾತನಾಡಿದರು. ಮೊದಲು ರಾಜನಾಗಿ ಅಧಿಕಾರ ಅನುಭವಿಸಿದ ಕನಕದಾಸರು ವೈರಾಗ್ಯ ತಾಳಿ ದಾಸರಾಗಿ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದರು ಎಂದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವಿ.ವೈ. ಪಾಟೀಲ, ನ್ಯಾಯವಾದಿ ಐ.ವಿ. ಪಾಟೀಲ ಮಾತನಾಡಿದರು. ವೀರಣ್ಣ ಬಡ್ಡಿ, ಶಿವಪುತ್ರಪ್ಪ ಜಕ್ಕಣ್ಣವರ ಇದ್ದರು. ಕಾಲೇಜಿನ ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಸ್ವಾಗತಿಸಿದರು. ಕೆ.ಎಸ್. ಬರದೆಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

