ಸುದ್ದಿ ಸಂಕ್ಷೇಪ
ಇಂದು ಖೋಖೋ ಪಂದ್ಯ
ರಾಣಿಬೆನ್ನೂರು: ನ. 23ರಂದು ಮಂಗಳೂರಿನ ವಿಶ್ವ ವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ರಾಜ್ಯ ಅಂತರ ಮಹಿಳಾ ವಿಶ್ವ ವಿದ್ಯಾಲಯಗಳ ಖೋಖೋ ಪಂದ್ಯಾವಳಿಯಲ್ಲಿ ಭಾಗವಹಿಸಲು ನಗರದ ರಾಜ ರಾಜೇಶ್ವರಿ ಕಾಲೇಜಿನ ನಾಲ್ಕು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ಪುಷ್ಪಾ ಕೆ.ಎ., ಚಿನ್ನವ್ವ ಕರಬಸಮ್ಮನವರ, ಗಂಗಮ್ಮ ತಳ್ಳೇರ, ಲತಾ ಜಿ.ಬಿ. ಅವರನ್ನು ಕೆಎಲ್‌ಇ ಶಿಕ್ಷಣ ಸಂಸ್ಥೆಯ ಸ್ಥಳೀಯ ಆಡಳಿತ ಮಂಡಳಿ ಉಪಾಧ್ಯಕ್ಷ ವಿ.ಪಿ. ಲಿಂಗನಗೌಡ್ರ, ಸದಸ್ಯರಾದ ಜಿ.ಸಿ. ಹುಲ್ಮನಿ, ಬಿ.ಎಸ್. ಪಟ್ಟಣಶೆಟ್ಟರ, ವೀರಣ್ಣ ಅಂಗಡಿ ಹಾಗೂ ಪ್ರಾಚಾರ್ಯರು ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ.
ತಡಸ ಶಾಲೆ ವಿದ್ಯಾರ್ಥಿಗಳ ಸಾಧನೆ
ಶಿಗ್ಗಾಂವಿ: ತಾಲೂಕಿನ ತಡಸ ವೀರಭದ್ರೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ವಿದ್ಯಾಶ್ರೀ ಶಂಕರ್ ಬಂಕಾಪುರ ಹಾಗೂ ಪ್ರೀತಿ ಕೃಷ್ಣಾ ಚವಡಾಳ ವಿಜ್ಞಾನ ಮತ್ತು ಗಣಿತ ವಿಷಯಗಳ ತಾಲೂಕು ಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆ ಮೆಚ್ಚಿ ಶಾಲೆಯ ಗುರುವೃಂದ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

