ಹಾವೇರಿ

ಕಾರ್ಮಿಕರು ಸಂಘಟಿತರಾಗಿ: ನಡುವಿನಕೇರಿ

Published On :

ರಾಣಿಬೆನ್ನೂರು: ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಯ ಲಾಭ ಪಡೆಯಲು ಕಟ್ಟಡ ಕಾರ್ಮಿಕರು (ಗೌಂಡಿಗಳು-ಗಾರಿಗೆ ಕೆಲಸಗಾರರು) ಸಂಘಟಿತರಾಗಬೇಕೆಂದು ಶುಭಮಂಗಳ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಯೂನಿಯನ್ ಅಧ್ಯಕ್ಷ ಬಿ.ಎಂ. ನಡುವಿನಕೇರಿ ಕರೆ ನೀಡಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದ ಅವರು, ಕಟ್ಟಡ ಕಾರ್ಮಿಕರೆಲ್ಲ ಬಡವರಾಗಿದ್ದು, ಅವರ ಆರೋಗ್ಯ ರಕ್ಷಣೆ, ಮಕ್ಕಳಿಗೆ ಶಿಕ್ಷಣ ಮುಂತಾದ ಸೌಲಭ್ಯಗಳಿವೆ. ಸಂಘಟನೆ ಸಲುವಾಗಿ ತಮ್ಮ ದೂ. 9902409175 ಸಂಪರ್ಕಿಸಬೇಕು. ಸಂಘದ ಸದಸ್ಯರಾಗಿರುವ ಕಾರ್ಮಿಕರು ಕೆಲಸ ಮಾಡುತ್ತಿರುವಾಗ ಅವಘಡ ಸಂಭವಿಸಿದರೆ ಪರಿಹಾರ ನೀಡುವುದಕ್ಕಾಗಿ ಸದಸ್ಯತ್ವ ಗುರುತಿನ ಚೀಟಿ ಪಡೆದಿರಬೇಕು ಎಂದರು. ಯೂನಿಯನ್ ಜಿಲ್ಲಾಧ್ಯಕ್ಷ ನಿಂಗಪ್ಪ ಎಂ.ಕೆ., ಉಪಾಧ್ಯಕ್ಷ ಮಹದೇವಪ್ಪ ಅಳಲಗೇರಿ, ಪ್ರಧಾನ ಕಾರ್ಯದರ್ಶಿ ಕರಿಯಪ್ಪ ಪಿ. ಮಿನಗದ, ಖಜಾಂಚಿ ಪುನೀತ ಎನ್.ಎಂ., ಸಂಘಟನಾ ಕಾರ್ಯದರ್ಶಿ ರೇಣುಕಾ ವಡಕಣ್ಣನವರ ಇನ್ನಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.