ಹಾವೇರಿ

ಮತದಾನದ ಹಕ್ಕಿನ ಜಾಗೃತಿ ಮೂಡಿಸಿ

Published On :

ರಾಣಿಬೆನ್ನೂರು: ಪ್ರಜಾಪ್ರಭುತ್ವದಲ್ಲಿ ಪ್ರತಿನಿಧಿಗಳನ್ನು ಆಯ್ಕೆ ಮಾಡುವುದಕ್ಕಾಗಿ ಮತದಾನದ ಹಕ್ಕನ್ನು ಚಲಾಯಿಸುವುದು ಅವಶ್ಯ. ಮತದಾರರ ಗುರುತಿನ ಚೀಟಿಯನ್ನು ಪಡೆಯಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಂಗನವಾಡಿ ಕಾರ್ಯಕರ್ತೆಯರು ಮುಂದಾಗಬೇಕೆಂದು ತಹಸೀಲ್ದಾರ್ ಹನುಮಂತಪ್ಪ ಬಡದಾಳ ಕರೆ ನೀಡಿದರು.
ಜಿಲ್ಲಾಡಳಿತ, ಜಿಪಂ, ತಾಪಂ, ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಸ್ವೀಪ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ನಗರಸಭೆ ಆವರಣದಲ್ಲಿರುವ ಗುಡ್ಡಪ್ಪ ಸ್ಮಾರಕ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಲೂಕಿನಲ್ಲಿ ಮತದಾರರ ಯಾದಿ ಪರಿಷ್ಕರಣೆ ಕಾರ್ಯ ಪ್ರಾರಂಭಗೊಂಡಿದೆ. ಮತದಾನದ ಹಕ್ಕನ್ನು ಪಡೆಯದೇ ಇರುವವರು ಯಾದಿ ಪರಿಷ್ಕರಣೆಗಾಗಿ ತಮ್ಮ ಮನೆಗೆ ಬರುವ ಪ್ರತಿನಿಧಿಗಳ ಹತ್ತಿರ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಮತದಾನದ ಮಹತ್ವವನ್ನು ಜನರಿಗೆ ತಿಳಿಸಲು ಮುಂದಾಗಬೇಕೆಂದು ಹೇಳಿದರು. ನಗರದ ಕೆಇಬಿ ಗಣೇಶ ದೇವಸ್ಥಾನದಿಂದ ಹೊರಟ ಜಾಗೃತಿ ಜಾಥಾ ಪ್ರಮುಖ ಬೀದಿಗಳಲ್ಲಿ ಹಾದು ಸಭಾಂಗಣ ತಲುಪಿತು. ಸಿಡಿಪಿಒ ಸುನಂದಾ ಅಯ್ಯನಗೌಡ್ರ, ಶಿರಸ್ತೇದಾರ ಚಿಕ್ಕೇಶ ಸಿ.ಜಿ., ಮೇಲ್ವಿಚಾರಕಿ ಲತಾ, ಜ್ಯೋತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.