ಸುದ್ದಿ ಸಂಕ್ಷೇಪ
ಹಾನಗಲ್ಲ ದುರ್ಗಾದೇವಿ ದೇವಸ್ಥಾನದಲ್ಲಿ ಇಂದು ಕಾರ್ತಿಕ ದೀಪೋತ್ಸವ
ಹಾನಗಲ್ಲ: ಪಟ್ಟಣದ ಕಿತ್ತೂರು ಚನ್ನಮ್ಮ ರಸ್ತೆಯಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ದೀಪೋತ್ಸವ ಕಾರ್ಯಕ್ರಮ ನ. 26ರಂದು ರಾತ್ರಿ 8 ಗಂಟೆಗೆ ನಡೆಯಲಿದೆ. ಇದಕ್ಕೂ ಮುನ್ನ ಬೆಳಗ್ಗೆ 9 ಗಂಟೆಗೆ ಶ್ರೀ ದುರ್ಗಾದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಸಂಜೆ 5.30ಕ್ಕೆ ಸುಮಂಗಲಿಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. 6.30ಕ್ಕೆ ಸಂಗೀತ ಶಿಕ್ಷಕ ಎನ್.ಐ. ಕೋಮಾರ ಹಾಗೂ ಸಂಗಡಿಗರಿಂದ ಸಂಗೀತ ಕಾರ್ಯಕ್ರಮವಿದೆ. ರಾತ್ರಿ 8 ಗಂಟೆಗೆ ಕಾರ್ತಿಕೋತ್ಸವ (ದೀಪೋತ್ಸವ), ಅನಂತರ ಮಹಾಪ್ರಸಾದ ವಿತರಣೆ ನಡೆಯಲಿದೆ ಎಂದು ದುರ್ಗಾದೇವಿ ಟ್ರಸ್ಟ್ ಸಮಿತಿ ಅಧ್ಯಕ್ಷ ದಿನೇಶ ಬಿ. ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂದು ಸಹಸ್ರ ದೀಪೋತ್ಸವ
ಸೋಮವಾರ ಪೇಟೆಯಲ್ಲಿರುವ ಬನಶಂಕರಿ ದೇವಿ ಮಂದಿರದಲ್ಲಿ ನ. 26ರಂದು ಸಂಜೆ 7 ಗಂಟೆಗೆ ಸಹಸ್ರ ದೀಪೋತ್ಸವ ನಡೆಯಲಿದ್ದು, ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಮಿತಿಯ ಪದಾಧಿಕಾರಿ ಬಸವರಾಜ ಬೆಂಡಿಗೇರಿ ತಿಳಿಸಿದ್ದಾರೆ.
ಮಾಸಿಕ ಶಿಬಿರಗಳು ರದ್ದು
ಹಾವೇರಿ: ಬೆಳಗಾವಿಯಲ್ಲಿ ಜರುಗುತ್ತಿರುವ ವಿಧಾನ ಮಂಡಲ ಅಧಿವೇಶನದ ಗಣ್ಯ ಹಾಗೂ ಅತಿಗಣ್ಯ ವ್ಯಕ್ತಿಗಳ ವಾಹನಗಳ ತಪಾಸಣಾ ಕರ್ತವ್ಯಕ್ಕಾಗಿ ಹಾವೇರಿ ಪ್ರಾದೇಶಿಕ ಸಾರಿಗೆ ಕಚೇರಿಯ ಮೋಟಾರು ವಾಹನ ನಿರೀಕ್ಷಕರನ್ನು ನಿಯೋಜಿಸಲಾಗಿದೆ. ಸಾರಿಗೆ ಕಚೇರಿ ವತಿಯಿಂದ ನ. 26ರಂದು ಶಿಗ್ಗಾಂವಿ, ಡಿ. 2ರಂದು ಹಿರೇಕೆರೂರಲ್ಲಿ ಹಾಗೂ ಡಿ. 5ರಂದು ಸವಣೂರಿನಲ್ಲಿ ಏರ್ಪಡಿಸಲಾಗಿದ್ದ ಮಾಸಿಕ ಶಿಬಿರಗಳನ್ನು ರದ್ದುಪಡಿಸಲಾಗಿದೆ. ಸಾರ್ವಜನಿಕರು ಈ ದಿನಗಳಂದು ತಮ್ಮ ಕೆಲಸ ಕಾರ್ಯಗಳಿಗಾಗಿ ಹಾವೇರಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಂಪರ್ಕಿಸಬೇಕೆಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್.ಎಂ. ಬಳವಳ್ಳಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

