ಎಲ್ಲ ಮೆಕ್ಕೆಜೋಳ ಖರೀದಿ
ಹಾವೇರಿ: ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ಆರಂಭಿಸಿರುವ ಮೆಕ್ಕೆಜೋಳ ಖರೀದಿ ಕೇಂದ್ರಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ರೈತರಿಗೆ ಅನುಕೂಲಕ್ಕಾಗಿ ತೆರೆದಿರುವ ಖರೀದಿ ಕೇಂದ್ರದಲ್ಲಿ ಸಣ್ಣ, ಅತಿ ಸಣ್ಣ, ದೊಡ್ಡ ರೈತರ ನಡುವೆ ತಾರತಮ್ಯ ಮಾಡಲಾಗುತ್ತಿದೆ ಎಂದು ಸದಸ್ಯರು ಆರೋಪಿಸಿದರು. ಖರೀದಿ ಕೇಂದ್ರದಿಂದ ಕೇವಲ 25 ಕ್ವಿಂಟಲ್ ಮೆಕ್ಕೆಜೋಳ ಖರೀದಿ ಮಾಡಲಾಗುತ್ತಿದೆ. ನೂರಾರು ಕ್ವಿಂಟಲ್ ಬೆಳೆದ ರೈತರು ಏನು ಮಾಡಬೇಕು? ಕೇವಲ 25 ಕ್ವಿಂಟಲ್ ಮಾರಾಟ ಮಾಡಲು ಅಗತ್ಯ ದಾಖಲೆಗಳನ್ನು ಹೊಂದಿಸಿಕೊಳ್ಳಲು ಸಾಕಷ್ಟು ತೊಂದರೆ ಪಡುವಂತಾಗಿದೆ. ರೈತರು ಬೆಳೆದ ಎಲ್ಲ ಮೆಕ್ಕೆಜೋಳವನ್ನು ಖರೀದಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಣಯಿಸಲಾಯಿತು.
ಒಂದು ಗಂಟೆ ವಿಳಂಬ
ಅಧಿಕಾರಿಗಳು ತಡವಾಗಿ ಬಂದರೆ ತರಾಟೆಗೆ ತೆಗೆದುಕೊಳ್ಳುವ ಜಿಪಂ ಸದಸ್ಯರು ತಾವೇ ಸೋಮವಾರ ನಡೆದ ಜಿಪಂ ಸಾಮಾನ್ಯ ಸಭೆಗೆ ಒಂದು ಗಂಟೆ ತಡವಾಗಿ ಬಂದರು. ಬೆಳಗ್ಗೆ 11 ಗಂಟೆಗೆ ಜಿಪಂ ಸಭಾಭವನದಲ್ಲಿ ಸಭೆ ನಿಗದಿಯಾಗಿತ್ತು. ಆ ವೇಳೆಗೆ ಎಲ್ಲ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಸಭೆಗೆ ಆಗಮಿಸಿದ್ದರು. ಆದರೆ ಕೋರಂ ಸೇರಲು ಒಂದು ಗಂಟೆ ಕಾಯಬೇಕಾಯಿತು. 12 ಗಂಟೆಗೆ ಸಭೆ ಆರಂಭವಾಯಿತು. ಜನಪ್ರತಿನಿಧಿಗಳೇ ಸಮಯಪ್ರಜ್ಞೆ ಬೆಳೆಸಿಕೊಳ್ಳದಿದ್ದರೆ ಅಧಿಕಾರಿಗಳೂ ವಿಳಂಬ ನೀತಿ ಅನುಸರಿಸುತ್ತಾರೆ ಎಂಬ ಮಾತು ಕೇಳಿಬಂತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

