ರೈತನ ಆತ್ಮಹತ್ಯೆಗೆ ಸರ್ಕಾರವೇ ಹೊಣೆ: ಎಲಿ
ಬ್ಯಾಡಗಿ: ಬೆಳಗಾವಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತ ವಿಠ್ಠಲ ಅರಭಾವಿ ಸಾವಿಗೆ ಸರ್ಕಾರವೇ ನೇರ ಹೊಣೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೃಷಿ ಸಚಿವ ಕೃಷ್ಣ ಭೈರೇಗೌಡ ನೈತಿಕ ಹೊಣೆ ಹೊತ್ತು ರಾಜಿನಾಮೆ ಸಲ್ಲಿಸುವಂತೆ ಕೃಷಿಕ ಸಮಾಜದ ಗಂಗಣ್ಣ ಎಲಿ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ರೈತನ ಪರಿಸ್ಥಿತಿ ಅರ್ಥೈಸಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ. ರೈತ ಹೋರಾಟಗಾರರನ್ನು ಸಂಶಯಾಸ್ಪದವಾಗಿ ನೋಡುತ್ತಿರುವ ಸರ್ಕಾರ ಇದು ರಾಜಕೀಯ ಪ್ರೇರಿತ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡುವ ಮೂಲಕ ರೈತ ಸಂಘಟನೆಗಳ ನೈತಿಕ ಬಲವನ್ನು ಕುಗ್ಗಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು. ಅತಿವೃಷ್ಟಿ, ಅನಾವೃಷ್ಟಿಯಿಂದ ರೈತ ಪ್ರತಿವರ್ಷವೂ ಸಂಕಷ್ಟಕ್ಕೆ ಸಿಲುಕುತ್ತಿದ್ದು, ಪ್ರಸಕ್ತ ವರ್ಷ ಜಿಲ್ಲೆಯ ರೈತರು ಕಳಪೆ ಹತ್ತಿ ಬೀಜದಿಂದಾಗಿ ಬೆಳೆ ಬಾರದೆ ಸಂಕಷ್ಟದಲ್ಲಿದ್ದಾರೆ. ಬೀದಿಗಿಳಿದು ಹೋರಾಟ ನಡೆಸಿದರೂ ಕ್ಯಾರೆ ಎನ್ನದ ಸರ್ಕಾರ ಇತ್ತ ಕಡೆ ತಿರುಗಿ ನೋಡಿಲ್ಲ. ಘಟನೆ ಮರೆಮಾಚುವ ಮುನ್ನ ಸೂಕ್ತ ಪರಿಹಾರ ನೀಡದಿದ್ದಲ್ಲಿ ಜಿಲ್ಲೆಯಲ್ಲಿ ನೂರಾರು ರೈತರು ವಿಠ್ಠಲ ಅರಭಾವಿ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂದರು.
ಪರಿಹಾರ ಇಲ್ಲ ವಿಷ: ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದರೂ ಕಳಪೆ ಬೀಜ ಎಲ್ಲ ರೈತರನ್ನು ಸಾಲಗಾರರನ್ನಾಗಿ ಮಾಡಿದೆ. ಹತ್ತಿಗಿಡದಲ್ಲಿ ಕಾಯಿಗಳಿಲ್ಲದೇ ಸಾಲಶೂಲ ಮಾಡಿ ಬಿತ್ತನೆ ಮಾಡಿದ್ದ ರೈತ ಕಂಗಾಲಾಗಿದ್ದಾನೆ. ಈ ಕುರಿತು ಸರ್ಕಾರ ಅಧಿವೇಶನದಲ್ಲಿ ಚರ್ಚೆ ನಡೆಸಿ ಪರಿಹಾರ ನೀಡಬೇಕೆ ಅಥವಾ ವಿಷ ಕೊಡಬೇಕೆ ಎಂಬ ನಿರ್ಧಾರಕ್ಕೆ ಬರುವಂತೆ ಆಗ್ರಹಿಸಿದರು. ತಾಲೂಕಾಧ್ಯಕ್ಷ ರುದ್ರಗೌಡ ಕಾಡನಗೌಡ್ರ, ಶಹರ ಘಟಕದ ಅಧ್ಯಕ್ಷ ಚಿಕ್ಕಪ್ಪ ಛತ್ರದ, ಅಶೋಕ ಮಾಳೇನಹಳ್ಳಿ, ಕೆ.ವಿ. ದೊಡ್ಡಗೌಡ್ರ, ಮಲ್ಲಕಾರ್ಜುನ ಬಳ್ಳಾರಿ, ಮಂಜುನಾಥ ಬೆನಕನಕೊಂಡ ನಾಗರಾಜ ಬಿದರಿ ಇದ್ದರು.
ರೈತನ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ರೈತ ಸಂಘ ನ. 28ರಂದು ಬೆಳಗ್ಗೆ 11 ಗಂಟೆಗೆ ಬ್ಯಾಡಗಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾಗಿ ಎಲಿ ತಿಳಿಸಿದರು.
ನಾಳೆ ಚರ್ಚಾ ಸ್ಪರ್ಧೆ
ರಾಣಿಬೆನ್ನೂರು: ಮೇಡ್ಲೆರಿ ರಸ್ತೆಯ ಹುಣಶಿಕಟ್ಟಿ ಕ್ರಾಸ್ನಲ್ಲಿರುವ ಎನ್.ಆರ್. ಸಂಕೇತ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನ. 29ರಂದು ಬೆಳಗ್ಗೆ 11 ಗಂಟೆಗೆ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ 'ಮೂಢನಂಬಿಕೆ ನಿಷೇಧ ಮಸೂದೆ ಬೇಕೆ? ಬೇಡವೆ?' ಎಂಬ ಕುರಿತು ತಾಲೂಕು ಮಟ್ಟದ ಚರ್ಚಾ ಸ್ಪರ್ಧೆ ನಡೆಯಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಲಕ್ಷ್ಮಣ ಉದ್ಘಾಟಿಸುವರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ ಬಿ.ಆರ್. ಪಾಟೀಲ, ತರಳಬಾಳು ಎಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ ಎಸ್.ಎನ್. ಶಿವಲಿಂಗಪ್ಪ, ಬಿಎಜೆಎಸ್ಎಸ್ ಮಹಿಳಾ ಕಾಲೇಜಿನ ಉಪ ಪ್ರಾಚಾರ್ಯ ಪ್ರೊ ಎನ್.ಕೆ. ರಾಮಚಂದ್ರಪ್ಪ ಆಗಮಿಸುವರು. ಮುಖ್ಯಶಿಕ್ಷಕ ಜಿ.ಎಚ್. ಉಮಾಕಾಂತ ಅಧ್ಯಕ್ಷತೆ ವಹಿಸುವರೆಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

