ಮಕ್ಕಳ ವಿಕಸನಕ್ಕೆ ಪ್ರತಿಭಾ ಕಾರಂಜಿ ವೇದಿಕೆ: ಸುಜಾತಾ
ಹಿರೇಕೆರೂರು: ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ. ವಿದ್ಯಾರ್ಥಿಗಳು ಪಠ್ಯಪುಸ್ತಕದ ಹುಳುವಾಗಿರದೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಂಡು ಬೌದ್ಧಿಕ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ಜಿಪಂ ಸದಸ್ಯೆ ಸುಜಾತಾ ಕೊಟಗಮನಿ ಕರೆ ನೀಡಿದರು.
ಪರ್ವತ ಶಿದ್ದೇರಿ ಸರ್ಕಾರಿ ಕಿಪ್ರಾ ಶಾಲೆಯಲ್ಲಿ ಜರುಗಿದ ಕಡೂರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅವರು, ಸಾಮಾನ್ಯ ಜ್ಞಾನ ಸಂಪಾದಿಸಿ. ಶಿಕ್ಷಕರು ಹಾಗೂ ಪಾಲಕರು ಆಸಕ್ತಿ ವಹಿಸಿ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತುಗೊಳಿಸಬೇಕು ಎಂದರು.
ಗ್ರಾಪಂ ಅಧ್ಯಕ್ಷ ಕುಬೇರಪ್ಪ ಕರಿಯಣ್ಣನವರ ಉದ್ಘಾಟಿಸಿದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಆರ್. ಮಲ್ಲೂರ ಪ್ರಾಸ್ತಾವಿಕ ಮಾತನಾಡಿದರು. ಎಸ್ಡಿಎಂಸಿ ಅಧ್ಯಕ್ಷ ಲಕ್ಷ್ಮಾನಾಯ್ಕ ಲಮಾಣಿ, ಉರ್ದು ಶಾಲೆ ಎಸ್ಡಿಎಂಸಿ ಅಧ್ಯಕ್ಷ ಮೆಹಬೂಬಸಾಬ ಜೋಕನಳ್ಳಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಶಾಂತಮ್ಮ ಹಾದಿಮನಿ, ತಾಪಂ ಸದಸ್ಯೆ ಶೋಭಾ ಲಕ್ಕನಗೌಡ್ರ, ಮಾಳಮ್ಮ ಕಚ್ಚರವಿ, ಶಿಕ್ಷಣ ಸಂಯೋಜಕ ಎಂ.ಡಿ. ಕುರುಬರ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಶಂಕರ ಲಮಾಣಿ, ಹಾಲಪ್ಪ ಬಳಗಾವಿ, ಪ್ರಭುಗೌಡ ಗುಬ್ಬಿ, ನೀಲಪ್ಪಕಣವೇರ, ಎಂ.ಬಿ. ರವಿಶೆಟ್ಟರ, ಉಜ್ಜನಗೌಡ ಲಕ್ಕನಗೌಡ್ರ, ಎಚ್.ಎಸ್. ಮಾಜಿಗೌಡ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

