ಹಾವೇರಿ

ಸಲೀಂ ಅಹ್ಮದ್ ಪ್ರವಾಸ

Published On :

ಹಾವೇರಿ: ನೆಹರು ಯುವ ಕೇಂದ್ರದ ಮಹಾ ನಿರ್ದೇಶಕ ಸಲೀಂ ಅಹ್ಮದ್ ನ. 30 ಹಾಗೂ ಡಿ. 1ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನ. 30ರಂದು ಬೆಳಗ್ಗೆ ಬೆಂಗಳೂರಿನಿಂದ ಹೊರಟು 11 ಗಂಟೆಗೆ ರಾಣಿಬೆನ್ನೂರಿಗೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಹಾವೇರಿಗೆ ಆಗಮಿಸಿ, ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 39ನೇ ರಾಷ್ಟ್ರೀಯ ಮಟ್ಟದ ಗ್ರಾಮೀಣ ಮಹಿಳಾ ಪೈಕಾ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ಆನಂತರ ಹಾವೇರಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು. ಡಿ. 1ರಂದು ಮಧ್ಯಾಹ್ನ 1.30ಕ್ಕೆ ಹಾವೇರಿಯಿಂದ ಹೊರಟು 2.30ಕ್ಕೆ ಹಾನಗಲ್ಲಗೆ ತೆರಳಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳಸುವರು.
ಇಂದಿನಿಂದ ಶಿರಸಿಯಲ್ಲಿ ರಾಜ್ಯ ಮಟ್ಟದ ಪೈಕಾ ಕ್ರೀಡಾಕೂಟ
ಹಾವೇರಿ: ಉತ್ತರ ಕನ್ನಡ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಇಲಾಖೆ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರದ ಆಶ್ರಯದಲ್ಲಿ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಪೈಕಾ ಗ್ರಾಮೀಣ ಕ್ರೀಡಾಕೂಟ ಗುಂಪು-2(ಖೋಖೋ, ಕಬಡ್ಡಿ, ಟೇಬಲ್ ಟೆನ್ನಿಸ್) ಕ್ರೀಡಾಕೂಟವನ್ನು ನ. 30ರಿಂದ ಡಿ. 2ರ ವರೆಗೆ ಶಿರಸಿಯ ಮಾರಿಕಾಂಬಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಈ ರಾಜ್ಯ ಮಟ್ಟದ ಗ್ರಾಮೀಣ (ಪೈಕಾ) ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಆಯಾ ಜಿಲ್ಲೆಯ ಜಿಲ್ಲಾ ಮಟ್ಟದ ಸಂಘಟನೆಯಲ್ಲಿ ಭಾಗವಹಿಸಿ ಖೋಖೋನಲ್ಲಿ ಪ್ರಥಮ ಸ್ಥಾನ ಪಡೆದ 12 ಬಾಲಕರು, 12 ಬಾಲಕಿಯರು, ಕಬಡ್ಡಿಯಲ್ಲಿ 10 ಬಾಲಕರು, 10 ಬಾಲಕಿಯರು, ಟೇಬಲ್ ಟೆನಿಸ್‌ನಲ್ಲಿ 4 ಬಾಲಕರು ಹಾಗೂ 4 ಬಾಲಕಿಯರು ಮಾತ್ರ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರು. ಹಾವೇರಿ ಜಿಲ್ಲೆಯ ಪೈಕಾ ಕ್ರೀಡಾಪಟುಗಳು ನ. 30ರಂದು ಬೆಳಗ್ಗೆ 11 ಗಂಟೆ ಒಳಗಾಗಿ ಶಿರಸಿ ಮಾರಿಕಾಂಬಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕೆಂದು ಹಾವೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೆ. ಮುತ್ತುಕಾಮಾಚ್ಚಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ. 08375-232443 ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.