ಹಾವೇರಿ

ದೈಹಿಕ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

Published On :

ಹಾವೇರಿ: ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿಯಿದ್ದರೂ ತುಂಬದೆ ಸರ್ಕಾರ ನಿರುದ್ಯೋಗಿ ದೈಹಿಕ ಶಿಕ್ಷಕರನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿದ್ದಪ್ಪ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿತು.
ಶಾಲೆಗಳಿಗೆ 2006ರಿಂದ ದೈಹಿಕ ಶಿಕ್ಷಕರನ್ನು ನೇಮಕ ಮಾಡಿಲ್ಲ. ದೈಹಿಕ ಪಠ್ಯಕ್ರಮ ಅಳವಡಿಸಿದ್ದರೂ ಶಿಕ್ಷಕರಿಲ್ಲದೆ ಅನುಷ್ಠಾನಗೊಳ್ಳುತ್ತಿಲ್ಲ. ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ 2 ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿದ್ದು, ಇದುವರೆಗೆ ಯಾವ ಸರ್ಕಾರವೂ ದೈಹಿಕ ಶಿಕ್ಷಕರ ನೇಮಕ ಮಾಡಿಲ್ಲ. ರಾಜ್ಯಾದ್ಯಂತ 50 ಸಾವಿರಕ್ಕೂ ಹೆಚ್ಚು ದೈಹಿಕ ಶಿಕ್ಷಕ ಪದವೀಧರರಿದ್ದು, ನಿರುದ್ಯೋಗಿಗಳಾಗಿದ್ದಾರೆ. ಅವರ ನೇಮಕಾತಿ ವಯೋವುತಿ ಮೀರುತ್ತಿದ್ದು, ಜೀವನ ಸಾಗಿಸುವುದು ದುಸ್ತರವಾಗಿದೆ. ಆದ್ದರಿಂದ ಪ್ರಾಥಮಿಕ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಹುದ್ದೆಗೆ ನೇಮಕಾತಿ ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ 40ಕ್ಕೂ ಹೆಚ್ಚು ದೈಹಿಕ ಶಿಕ್ಷಣ ಕಾಲೇಜುಗಳಿದ್ದು, ವರ್ಷಕ್ಕೆ ಪ್ರತಿ ಕಾಲೇಜಿನಿಂದ 20 ವಿದ್ಯಾರ್ಥಿಗಳು ತರಬೇತಿ ಪಡೆದು ಹೊರಬರುತ್ತಿದ್ದಾರೆ. ಆದರೆ ನೇಮಕಾತಿ ಇಲ್ಲದೆ ನಿರುದ್ಯೋಗಿಗಳಾಗಿ ಕಾಲ ಕಳೆಯುವಂತಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಘಟನೆ ಉಗ್ರ ಹೋರಾಟ ಹಮ್ಮಿಕೊಳ್ಳುತ್ತದೆ ಎಂದು ಎಚ್ಚರಿಸಿದರು. ಎಬಿವಿಪಿ ಸಂಚಾಲಕ ಸಿದ್ದು ಮಡರಕಂಡಿ ನೇತೃತ್ವದಲ್ಲಿ ಮನವಿಯನ್ನು ತಹಸೀಲ್ದಾರ್‌ಗೆ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.