ಹಾವೇರಿ

ಮಹಿಳಾ ನರ್ಸಿಂಗ್ ಹಾಸ್ಟೆಲ್‌ಗೆ ಅರ್ಜಿ

Published On :

ಹಾವೇರಿ: ಪ್ರಸಕ್ತ ಸಾಲಿಗೆ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಯಿಂದ ಹಾವೇರಿ ನಗರದಲ್ಲಿ ಹೊಸದಾಗಿ ಮಂಜೂರಾದ ಮೆಟ್ರಿಕ್ ನಂತರದ ಮಹಿಳಾ ನರ್ಸಿಂಗ್ ವಿದ್ಯಾರ್ಥಿ ನಿಲಯಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಡಿ. 10ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ನರ್ಸಿಂಗ್ ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ವಿದ್ಯಾರ್ಥಿನಿಯರಿಗೆ ಉಚಿತ ಊಟ, ವಸತಿ, ಗ್ರಂಥಾಲಯ, ಪುಸ್ತಕ ಸೌಲಭ್ಯ ಒದಗಿಸಲಾಗುವುದು. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರಿಗೆ ಶೇ. 75 ಹಾಗೂ ಪರಿಶಿಷ್ಟ ಜಾತಿ, ಪಂಗಡದವರಿಗೆ ಶೇ. 25ರಷ್ಟು ಪ್ರವೇಶಾವಕಾಶ ನೀಡಲಾಗುವುದು. ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣಪತ್ರ, ಕಳೆದ ಸಾಲಿನಲ್ಲಿ ಪಾಸಾದ ಅಂಕಪಟ್ಟಿ ಲಗತ್ತಿಸಬೇಕು. ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ವಾರ್ಷಿಕ ಆದಾಯ ರು. 44,500 ಒಳಗಿರಬೇಕು. ಪರಿಶಿಷ್ಟ ಜಾತಿ, ಪಂಗಡದವರಿಗೆ ಆದಾಯ ಮಿತಿ ಇಲ್ಲ. ಅರ್ಜಿ ನಮೂನೆ, ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯ (ತಾಪಂ ಕಚೇರಿ ಆವರಣ) ಹಾವೇರಿ- ಇಲ್ಲಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.