ಹಾವೇರಿ

ಮಹಿಳೆಯರಿಗಾಗಿ ಕಾನೂನು ಅರಿವು ನೆರವು

Published On :

ಹಾನಗಲ್ಲ: ಕಾನೂನು ದಿನಾಚರಣೆ ಅಂಗವಾಗಿ ಮಂಗಳವಾರ ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಮಹಿಳೆಯರಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಹಾನಗಲ್ಲ ಹಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶ ಎಂ. ರಾಮಚಂದ್ರ, ಭಾರತ ಸಂವಿಧಾನದ ಅಂತಿಮ ಕರಡು ರಚನೆಯಾದ ನ. 26ನ್ನು ಕಾನೂನು ದಿನವಾಗಿ ಆಚರಿಸಲಾಗುತ್ತಿದೆ ಎಂದರು. ಮುಖ್ಯ ಅತಿಥಿ ಕಿರಿಯ ವಿಭಾಗದ ನ್ಯಾಯಾಧೀಶ ಮಧ್ವೇಶ ದಬೇರ ಮಾತನಾಡಿ, ಸಿವಿಲ್, ಕ್ರಿಮಿನಲ್ ಪ್ರಕರಣಗಳು, ವ್ಯಾಜ್ಯಗಳು ಲೋಕ ಅದಾಲತ್ ಮೂಲಕ ನ್ಯಾಯಾಲಯದಲ್ಲಿ ಶೀಘ್ರಗತಿಯಲ್ಲಿ ಇತ್ಯರ್ಥವಾಗುವ ಅವಕಾಶಗಳಿದ್ದು, ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶಿವಲೀಲಾ ಕ್ಯಾಡಿ ನೊಂದ ಮಹಿಳೆಗೆ ಇಲಾಖೆಯಿಂದ ಸವಲತ್ತುಗಳು ಕುರಿತು ಉಪನ್ಯಾಸ ನೀಡಿದರು. ನ್ಯಾಯವಾದಿ ಪಿ.ಜಿ. ಕಾಮನಹಳ್ಳಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆ ಬಗ್ಗೆ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಹಾನಗಲ್ ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಚೈತ್ರಾ ಕಂಬಾಳಿಮಠ ಮತ್ತು ನ್ಯಾಯವಾದಿಗಳ ಸಂಘದ ಅಧ್ಯಕ್ಷ ರವಿ ವಡೆಯರ ಮಾತನಾಡಿದರು. ಸಹಾಯಕ ಸರ್ಕಾರಿ ಅಭಿಯೋಜಕ ಸೂರ್ಯನಾರಾಯಣ ಉಪಸ್ಥಿತರಿದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.