ಮಾಧ್ಯಮಿಕ ಶಾಲಾ ನೌಕರರ ಪ್ರತಿಭಟನೆ
ಹಾವೇರಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘ ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ನೌಕರರು ಪ್ರತಿಭಟನಾ ರ್ಯಾಲಿ ಆರಂಭಿಸಿ ಮಹಾತ್ಮಾ ಗಾಂಧಿ ರಸ್ತೆ ಮೂಲಕ ಸಾಗಿ ಮಹಾದೇವ ಮೈಲಾರ ವೃತ್ತದಲ್ಲಿ ಸಮಾವೇಶಗೊಂಡರು. ಸಂಘದ ಜಿಲ್ಲಾಧ್ಯಕ್ಷ ಎಂ.ಬಿ. ಸಾವಜ್ಜಿ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಅನುದಾನ ರಹಿತ ಅವಧಿಯಲ್ಲಿ ಸಲ್ಲಿಸಿದ ಸೇವೆಗೆ ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ವೇತನ ನಿಗದಿ ಮಾಡಿ, ಬಾಕಿ ವೇತನದೊಂದಿಗೆ ಸಂಬಳ ಬಿಡುಗಡೆ ಮಾಡಬೇಕು. ಅರ್ಹ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಖಾಲಿ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಬೇಕು. 2006ರ ಬಳಿಕ ನೇಮಕಗೊಂಡ ನೌಕರರಿಗೆ ಪಿಂಚಣಿ ಸಮಸ್ಯೆ ನಿವಾರಿಸಬೇಕೆಂದರು.
ಮಾಜಿ ಸಚಿವ ಬಸವರಾಜ ಹೊರಟ್ಟಿ, ಸರ್ಕಾರಿ ನೌಕರರಿಗೆ ನೀಡುವ ಎಲ್ಲ ಸೌಲಭ್ಯಗಳನ್ನು ಅನುದಾನಿತ ಶಾಲಾ ನೌಕರರಿಗೂ ನೀಡಬೇಕು. ಬೇರೆ ಜಿಲ್ಲೆಯಿಂದ ವರ್ಗಾವಣೆಯಾಗುವ ನೌಕರರಿಗೆ ಬಡ್ತಿ ಸೌಲಭ್ಯವನ್ನು ಅನುದಾನಿತ ಸಂಸ್ಥೆ ನೌಕರರಿಗೂ ವಿಸ್ತರಿಸಬೇಕು. ಹೆಚ್ಚುವರಿ ಶಿಕ್ಷಕರ ಸಮಸ್ಯೆ ನಿವಾರಣೆಗೆ ವಿದ್ಯಾರ್ಥಿ- ಶಿಕ್ಷಕರ ಅನುಪಾತವನ್ನು 50ಕ್ಕೆ ನಿಗದಿಪಡಿಸಬೇಕೆಂದು ಆಗ್ರಹಿಸಿದರು. ಕಾರ್ಯದರ್ಶಿ ಎ.ಐ. ಮಳೆಣ್ಣನವರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

