ಕಾಮಗಾರಿ ಕಳಪೆಯಾದರೆ ಕ್ರಮ: ಶಾಸಕ ತಹಶೀಲ್ದಾರ
ಕನ್ನಡಪ್ರಭ ವಾರ್ತೆ, ಹಾನಗಲ್ಲ, ಅ. 23
ಸರ್ಕಾರದ ಯಾವುದೇ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಕಳಪೆ ಎಂದು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕಾಗುತ್ತದೆ ಎಂದು ಶಾಸಕ ಮನೋಹರ ತಹಶೀಲ್ದಾರ ಎಚ್ಚರಿಸಿದರು.
ಮಂಗಳವಾರ ತಾಲೂಕಿನ ನೆಗವಣಗಿ ಗ್ರಾಮದಲ್ಲಿ ರು. 25.25 ಲಕ್ಷ ವೆಚ್ಚದ ಬೈಚವಳ್ಳಿ- ನೆಗವಣಗಿ 1.4 ಕಿ.ಮೀ. ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಅವರು, ರಸ್ತೆ ಸೇರಿದಂತೆ ಯಾವುದೇ ಕಾಮಗಾರಿಯನ್ನೂ ಕಳಪೆಗೆ ಅವಕಾಶ ಇಲ್ಲದಂತೆ ಪೂರೈಸಲು ಜನರ ಸಹಕಾರವೂ ಅಗತ್ಯ. ಗುಣಮಟ್ಟದ ವಿಷಯದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಕಾಮಗಾರಿಗಳು ವಿಳಂಬವಿಲ್ಲದಂತೆ ಸರಿಯಾಗಿ ಪೂರ್ಣಗೊಳ್ಳಬೇಕು. ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನ ಸಮುದಾಯ ವಾಸಿಸುವ ಕ್ಷೇತ್ರದಲ್ಲಿ ರು. 80 ಲಕ್ಷ ವೆಚ್ಚದಲ್ಲಿ ರಸ್ತೆ ಹಾಗೂ ಗಟಾರ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಮೂಲಕ ಕೈಗೊಳ್ಳಲಾಗುವುದು. ಇದರೊಂದಿಗೆ ಸಮಾಜ ಕಲ್ಯಾಣ ಇಲಾಖೆ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯ ವಾಸಿಸುವ ಕ್ಷೇತ್ರದಲ್ಲಿ ರು. 1.25 ಕೋಟಿಯಲ್ಲಿ ರಸ್ತೆ ಹಾಗೂ ಗಟಾರ ಕಾಮಗಾರಿ ಕೈಕೊಳ್ಳಲಾಗುವುದು ಎಂದು ತಿಳಿಸಿದರು.
ತಾಪಂ ಅಧ್ಯಕ್ಷ ಮಲ್ಲನಗೌಡ ವೀರನಗೌಡ್ರ, ತಾಪಂ ಸದಸ್ಯೆ ಸುಮಂಗಲಾ ದೊಡ್ಡಮನಿ ಪಾಲ್ಗೊಂಡಿದ್ದರು. ಲೋಕೋಪಯೋಗಿ ಇಲಾಖೆ ಅಧಿಕಾರಿ ಬಿಲೈ. ಬಂಡೀವಡ್ಡರ, ರಂಗನಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

