ಬಿಜೆಪಿಗೆ ಆಯ್ಕೆ
ರಾಣಿಬೆನ್ನೂರು: ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ರೂಪಾ ಬಾಕಳೆ, ಪ್ರ.ಕಾರ್ಯದರ್ಶಿ ಜಯಲಕ್ಷ್ಮಿ ಕೋರಿಶೆಟ್ಟರ್, ಕಾರ್ಯದರ್ಶಿ ಸುಧಾ ಬಾಕಳೆ, ಉಪಾಧ್ಯಕ್ಷರಾಗಿ ನೀಲಾಂಬಿಕಾ ನಿಡಗುಂದಿ, ವಿಮಲಾ ಬಡಿಗೇರ, ಸದಸ್ಯರಾಗಿ ರೇಖಾ ಚಿನ್ನಣ್ಣನವರ, ಶಾರದಾ ಆನ್ವೇರಿ, ಶಾರದಾ ಜಂಬಗಿ, ನಸ್ರೀನ್ ಬಾನು ಗೌಸ್ಪೀರ್, ಜಯಲಕ್ಷ್ಮಿ ಅಂಗಡಿ, ಶೋಭಾ ರಮಾಳದ, ಫಾತಿಮಾಭಿ ಶೇಖ, ಗಿರಿಜಮ್ಮ ನಿಡಗುಂದಿ, ಪಾರಮ್ಮ ಬ್ಯಾಡಗಿ, ಮೇಹರೂನಾ ಚೌದ್ರಿ, ನಾಗಮ್ಮ ಚೌರದಾರ, ಕಾಳಮ್ಮ ಕಡಕೋಳ, ರತ್ನಮ್ಮ ಮಾಕನೂರುಮಠ, ಜಯಶೀಲಾ ಹೊನ್ನಾಳಿ, ನೇತ್ರಾ ಓಲೇಕಾರ, ಚೌಡಮ್ಮ ಅಂತರವಳ್ಳಿ ಆಯ್ಕೆಯಾಗಿದ್ದಾರೆಂದು ಜಿಲ್ಲಾಧ್ಯಕ್ಷ ಭೋಜರಾಜ ಕರೂದಿ, ಮಹಿಳಾ ಅಧ್ಯಕ್ಷೆ ಮಂಜುಳಾ ಕರಬಸಮ್ಮನವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--
ನ. 5ರಿಂದ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭ: ಕುರೇರ
ಹಾವೇರಿ: ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ಉತ್ತಮ ಗುಣಮಟ್ಟದ (ಎಫ್ಎಕ್ಯೂ) ಮೆಕ್ಕೆಜೋಳ ಉತ್ಪನ್ನಕ್ಕೆ ಪ್ರತಿ ಕ್ವಿಂಟಲ್ಗೆ ರು. 1310, ಬಿಳಿಜೋಳಕ್ಕೆ ರು. 1800 ಹಾಗೂ ರಾಗಿಗೆ ರು. 1800 ದರ ನಿಗದಿಪಡಿಸಿದೆ ಎಂದು ಜಿಲ್ಲಾ ಕಾರ್ಯಪಡೆ ಸಮಿತಿ ಅಧ್ಯಕ್ಷ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಾವೇರಿ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಮೆಕ್ಕೆಜೋಳ, ರಾಗಿ ಮತ್ತು ಬಿಳಿಜೋಳವನ್ನು ಖರೀದಿಸಲು ರಾಣಿಬೆನ್ನೂರು, ಬ್ಯಾಡಗಿ, ಹಾವೇರಿ, ಸವಣೂರು, ಹಿರೇಕೆರೂರು, ಹಾನಗಲ್ಲ ಮತ್ತು ಶಿಗ್ಗಾಂವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣಗಳ ಆವರಣದಲ್ಲಿ ನ. 5ರಿಂದ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು. ಸರ್ಕಾರದಿಂದ ನೇಮಕಗೊಂಡ ಕೆಎಫ್ಸಿಎಫ್ಸಿ ಖರೀದಿ ಪ್ರಕ್ರಿಯೆ ನಡೆಸಲಿದೆ. ರೈತರು ಎಫ್ಎಕ್ಯೂ ಗುಣಮಟ್ಟದ ಮೆಕ್ಕೆಜೋಳ, ಬಿಳಿಜೋಳ ಹಾಗೂ ರಾಗಿಯನ್ನು 50 ಕೆಜಿ ಗೋಣಿ ಚೀಲಗಳಲ್ಲಿ ತುಂಬಿಕೊಂಡು ಖರೀದಿ ಕೇಂದ್ರಗಳಿಗೆ ತರಲು ತಿಳಿಸಿದರು.
ಸಭೆಯಲ್ಲಿ ಹಾವೇರಿ ಉಪವಿಭಾಗಾಧಿಕಾರಿ ಮಹ್ಮದ ಜುಬೇರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಗಣೇಶ ನಾಯ್ಕ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಸಿ.ವಿ. ಕೊಡ್ಲಿ, ಜಿಲ್ಲೆಯ ಎಲ್ಲ ತಾಲೂಕುಗಳ ಕೃಷಿ ಉತ್ಪನ್ನ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಹಾಜರಿದ್ದರು. ಕಾರ್ಯಪಡೆ ಸಮಿತಿ ಸದಸ್ಯ ಕಾರ್ಯದರ್ಶಿ ಎನ್.ಬಿ. ಅಜ್ಜಪ್ಪನವರ ಸ್ವಾಗತಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

