ಹಿರೇಕೆರೂರು ತಾಪಂ ಅಧ್ಯಕ್ಷರಾಗಿ ರೇಣುಕಾ ಚಲವಾದಿ ಅವಿರೋಧ ಆಯ್ಕೆ
ಹಿರೇಕೆರೂರು: ಹಿರೇಕೆರೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ರೇಣುಕಾ ಮಂಜಪ್ಪ ಚಲವಾದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಪಂ ಸಭಾಂಗಣದಲ್ಲಿ ಜರುಗಿದ ಸರಳ ಸಮಾರಂಭದಲ್ಲಿ ಅವರನ್ನು ಅಭಿನಂದಿಸಲಾಯಿತು.
ಶಾಸಕ ಯು.ಬಿ. ಬಣಕಾರ ಮಾತನಾಡಿ, ತಾಪಂ ಎರಡನೇ ಅವಧಿಗೆ ತಡಕನಹಳ್ಳಿ ಕ್ಷೇತ್ರದ ಸದಸ್ಯೆ ರೇಣುಕಾ ಮಂಜಪ್ಪ ಚಲವಾದಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷರಾಗಿ ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಇದು ದೋಣಿ ಸಾಲಿನ ಜನತೆಗೆ ಸಂತಸ ತಂದಿದೆ. ಎಲ್ಲ ಸದಸ್ಯರ ಬೆಂಬಲ ಪಡೆದು, ಜನತೆಯ ಆಶೋತ್ತರಗಳಿಗೆ ಸ್ಪಂದಿಸುತ್ತ ಉತ್ತಮ ಸೇವೆ ಸಲ್ಲಿಸಬೇಕು ಎಂದು ಕಿವಿಮಾತು ಹೇಳಿದರು.
ಅಧಿಕಾರ ಶಾಶ್ವತವಲ್ಲ. ಜನಪ್ರತಿನಿಧಿಗಳು ಮಾಡುವ ಸಾರ್ವಜನಿಕ ಸೇವೆಯೇ ಸದಾ ನೆನಪಿನಲ್ಲಿ ಉಳಿಯುತ್ತದೆ. ತಾಪಂ ಹಾಗೂ ಪಿಎಲ್ಡಿ ಬ್ಯಾಂಕ್ನ ಆಡಳಿತ ಮಂಡಳಿ ಸದಸ್ಯರು ತಮ್ಮ ಅವಧಿಯಲ್ಲಿ ದೋಷರಹಿತ, ಜನಪರ ಆಡಳಿತ ನೀಡಬೇಕು. ಈ ಮೂಲಕ ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿ ಸುಗಮ ಮಾಡಿಕೊಳ್ಳಬೇಕು. ಜನ ಕೊಟ್ಟ ಅಧಿಕಾರವೇ ನಮ್ಮ ಆಸ್ತಿ ಎಂದರು.
ತಾಪಂ ಅಧ್ಯಕ್ಷೆ ರೇಣುಕಾ ಚಲವಾದಿ ಮಾತನಾಡಿ, ಅಧಿಕಾರ ದುರ್ಬಳಕೆ ಮಾಡಿಕೊಳ್ಳದೆ ಜನಪರ ಆಡಳಿತ ನೀಡುವುದು ತಮ್ಮ ಗುರಿ. ಜವಾಬ್ದಾರಿಯುತ, ಕ್ರಿಯಾಶೀಲವಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.
ತಾಪಂ ಉಪಾಧ್ಯಕ್ಷೆ ಅನ್ನಪೂರ್ಣಾ ಗಾಳಿ, ಮಾಜಿ ಅಧ್ಯಕ್ಷ ಶಿವಣ್ಣ ಗಡಿಯಣ್ಣನವರ, ಮಾಜಿ ಉಪಾಧ್ಯಕ್ಷೆ ನಿರ್ಮಲಾ ಗುಬ್ಬಿ, ಸುನೀತಾ ಕೊಡ್ಲೇರ, ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರು ಅಣ್ಣಪ್ಪನವರ, ಸದಸ್ಯರಾದ ಬಸನಗೌಡ ಕಳ್ಳೇರ, ಪ್ರಭಾವತಿ ಕುಲಕರ್ಣಿ, ರತ್ನಾ ಕಂಕನವರ, ಕೆಜೆಪಿ ಅಧ್ಯಕ್ಷ ಮಹೇಶ ಗುಬ್ಬಿ, ಮುಖಂಡರಾದ ಮಹೇಂದ್ರ ಬಡಳ್ಳಿ, ಲಿಂಗರಾಜ ಚಪ್ಪರದಳ್ಳಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

