ಹಾವೇರಿ

ಮಹಿಳಾ ಸಬಲೀಕರಣ ಕಾರ್ಯಕ್ರಮ ನಾಳೆ

Published On :

ಹಾವೇರಿ: ಹಾವೇರಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಮಹಿಳಾ ಮಂಡಳಗಳು, ಸ್ತ್ರೀ ಶಕ್ತಿ ಸಂಘಗಳು ಹಾಗೂ ಯುವತಿ ಮಂಡಳಿಗಳ ಆಶ್ರಯದಲ್ಲಿ ಮಹಿಳಾ ಸಬಲೀಕರಣ ಹಾಗೂ ಪುನಶ್ಚೇತನ ಕಾರ್ಯಕ್ರಮ ಅ. 26ರಂದು ಬೆಳಗ್ಗೆ 11 ಗಂಟೆಗೆ ನಗರದ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಜರುಗಲಿದೆ. ನೆಹರು ಯುವ ಕೇಂದ್ರದ ಮಹಾ ನಿರ್ದೇಶಕ ಸಲೀಂ ಅಹ್ಮದ್ ಉದ್ಘಾಟಿಸುವರು. ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ನಗರಸಭೆ ಉಪಾಧ್ಯಕ್ಷೆ ರತ್ನಾ ಭೀಮಕ್ಕನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಚನ್ನಮ್ಮ ಹೊಳಿಹೊಸೂರು, ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಉಪಾಧ್ಯಕ್ಷೆ ಗೀತಾ ಪಾಟೀಲ, ಜಿಲ್ಲಾ ಪರಿಸರ ವೇದಿಕೆ ಅಧ್ಯಕ್ಷೆ ಮಾಧುರಿ ದೇವಧರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಲಿತಾ ಡಿ.ಎಚ್. ಭಾಗವಹಿಸುವರು. ವರದಾ ಸೌಹಾರ್ದ ಮಹಿಳಾ ಒಕ್ಕೂಟದ ಅಧ್ಯಕ್ಷೆ ನೀಲಮ್ಮ ಗೌಡಪ್ಪನವರ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಗಣೇಶ ಮರಾಠೆ ವಿಶೇಷ ಉಪನ್ಯಾಸ ನೀಡುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.