ಹಾವೇರಿ

ಹುಲಗೂರು ಗ್ರಾಪಂ ಕಟ್ಟಡ ಪೂರ್ಣಗೊಳಿಸಲು ಆಗ್ರಹ

Published On :

ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಅ. 25
ಗ್ರಾಮ ಪಂಚಾಯತಿ ಕಾರ್ಯಾಲಯ ಕಟ್ಟಡದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಿ, ಪಂಚಾಯತಿ ಸುಪರ್ದಿಗೆ ನೀಡಬೇಕು. ಇಲ್ಲದಿದ್ದರೆ ಭೂಸೇನಾ ನಿಗಮದ ಕಚೇರಿ ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ತಾಲೂಕಿನ ಹುಲಗೂರ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರು ಎಚ್ಚರಿಸಿದ್ದಾರೆ.
2010-11ನೇ ಸಾಲಿನ ಸುವರ್ಣ ಗ್ರಾಮ ಯೋಜನೆಯಲ್ಲಿ ತಾಲೂಕಿನ ಹುಲಗೂರ ಗ್ರಾಪಂ ಕಾರ್ಯಾಲಯದ ಕಟ್ಟಡ ಕಾಮಗಾರಿ ಕೈಗೊಳ್ಳಲು ರು. 19.90 ಲಕ್ಷ ಅನುದಾನ ಮಂಜೂರಾಗಿತ್ತು. ಕಾಮಗಾರಿಯನ್ನು ಭೂಸೇನಾ ನಿಗಮ ವಹಿಸಿಕೊಂಡಿದ್ದು, ಕೆಲಸ ಆಮೆಗತಿಯಲ್ಲಿ ಸಾಗಿದೆ. ಆರು ತಿಂಗಳಿಂದ ಕಾಮಗಾರಿಯಲ್ಲಿ ಯಾವುದೇ ಪ್ರಗತಿಯಾಗಿಲ್ಲ ಎಂದು ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರು ಆರೋಪಿಸಿದ್ದಾರೆ.
ಗ್ರಾಪಂ ಕಟ್ಟಡದ ಮೇಲೆ ಸಭಾಭವನ ನಿರ್ಮಿಸಲು ಯೋಜನೆ ರೂಪಿಸಿದ್ದು, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ರು. 10 ಲಕ್ಷ ವೆಚ್ಚದಲ್ಲಿ ಮೇಲ್ಛಾವಣಿ ನಿರ್ಮಿಸಲು ಉದ್ದೇಶಿಸಲಾಗಿದೆ. ಕಾರ್ಯಾಲಯದ ಕಾಮಗಾರಿ ಬೇಗನೆ ಪೂರ್ಣಗೊಳಿಸಿ, ಮುಂದಿನ ಕೆಲಸಕ್ಕೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದ್ದಾರೆ. ಗ್ರಾಪಂ ಅಧ್ಯಕ್ಷೆ ಮರೇಂಬಿ ನೇರ್ತಿ, ಉಪಾಧ್ಯಕ್ಷೆ ರತ್ನವ್ವ ಸಂಶಿ, ಶೇಖಣ್ಣಾ ಗಣಾಚಾರಿ, ಸಯ್ಯದ ಕಲೀಹುದ್ದಿನ ಎಸ್. ಖಾದ್ರಿ, ಮಹ್ಮದ್ ಗೌಸ್ ಕಳ್ಳಿಮನಿ, ಬಾಬುಸಾಬ ಚಂದರಗಿ, ಜಾವೇದ ಸವಣೂರ, ಖಾದರಗೌಸ್ ನೇರ್ತಿ, ರೀಯಾಜ್ ಅಹ್ಮದ್ ಮುಲ್ಲಾ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.