ಹಾವೇರಿ

ಅನುಚಿತ ವರ್ತನೆ: ಪದವೀಧರರ ವೇದಿಕೆ ಪ್ರತಿಭಟನೆ

Published On :

ಬ್ಯಾಡಗಿ: ಮತದಾರರ ಜತೆ ಅನುಚಿತವಾಗಿ ವರ್ತಿಸುತ್ತಿರುವ ತಹಸೀಲ್ದಾರ್ ಕಚೇರಿ ಚುನಾವಣಾ ವಿಭಾಗದ ಸಿಬ್ಬಂದಿ ವಿರುದ್ಧ ಪ್ರಜಾಸತ್ತಾತ್ಮಕ ಪದವೀಧರರ ವೇದಿಕೆ ಸದಸ್ಯರು ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ಗೆ ಮನವಿ ಸಲ್ಲಿಸಿದರು.
ರಾಜ್ಯ ಘಟಕದ ಉಪಾಧ್ಯಕ್ಷ, ನ್ಯಾಯವಾದಿ ಸುರೇಶ್ ಚಲವಾದಿ ಮಾತನಾಡಿ, ಚುನಾವಣಾ ವಿಭಾಗದಲ್ಲಿ ಶಿರಸ್ತೇದಾರರಾಗಿ ಕೆಲಸ ಮಾಡುತ್ತಿರುವ ಜಯಣ್ಣ ತಳವಾರ ಹಾಗೂ ಪ್ರಥಮ ದರ್ಜೆ ಸಹಾಯಕ ಪರಶುರಾಮ ಪಾತ್ರೋಟಿ ಪದವೀಧರ ಮತದಾರರ ನೋಂದಣಿ ಮಾಡದೆ, ಇಲ್ಲಸಲ್ಲದ ಸಬೂಬು ಹೇಳಿ ವಾಪಸ್ ಕಳುಹಿಸಿದ್ದಾರೆ. ಮಾಹಿತಿ ಕೇಳಿದವರನ್ನು ಚಿಕ್ಕ ಮಕ್ಕಳಂತೆ ಗದರಿಸಿದ್ದಾರೆ ಎಂದು ಆರೋಪಿಸಿದರು.
ತಾಲೂಕು ಘಟಕದ ಅಧ್ಯಕ್ಷ ಜಗದೀಶ ಹಾಲನಗೌಡ್ರ ಮಾತನಾಡಿ, ಪದವೀಧರರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಚೇರಿಗೆ ಅನಗತ್ಯವಾಗಿ ಗೈರಾಗುತ್ತಿದ್ದು, ಅರ್ಜಿ ಸಲ್ಲಿಸಲು ನಿತ್ಯ ಅಲೆದಾಡುವಂತಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಹೆಣಗಾಡಬೇಕಾಗಿದೆ. ಸಂವಿಧಾನಾತ್ಮಕವಾಗಿ ನೀಡಿರುವ ಹಕ್ಕುಗಳನ್ನು ಕಳೆದುಕೊಳ್ಳುವಂತಾಗಿದೆ. ಈ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಶಂಭು ಮಠದ, ವಿಜಯಕುಮಾರ ಸಜ್ಜನಶೆಟ್ರ, ಸರೋಜಿನಿ ಭಾರಾಟಕ್ಕೆ, ಕರಬಸಪ್ಪ ಹರಿಯಾಳದ, ನ್ಯಾಯವಾದಿಗಳಾದ ಭರತ್ ಚೂರಿ, ನಿಂಗಪ್ಪ ಬಟ್ಟಲಕಟ್ಟಿ, ಪ್ರಶಾಂತ್ ದೊಡ್ಮನಿ, ಎಸ್.ಎಸ್. ಪಟ್ಟಣಶೆಟ್ಟಿ, ಡಿ.ಎಸ್. ಭಾನುವಳ್ಳಿ, ಎಂ.ಎಸ್. ಕೊಪ್ಪದ, ಎನ್.ಬಿ. ಬಳಿಗಾರ, ಶಿವನಗೌಡ ಬಸನಗೌಡ್ರ ಇದ್ದರು.

ವಸತಿ ಗೃಹಗಳ ಉದ್ಘಾಟನೆ
ಹಾವೇರಿ: ನಗರದಲ್ಲಿ ರು. 88 ಲಕ್ಷ ವೆಚ್ಚದಲ್ಲಿ ಜಿಲ್ಲಾ ಪಂಚಾಯತಿಯ ಹಿರಿಯ ಅಧಿಕಾರಿಗಳಿಗಾಗಿ ನಿರ್ಮಿಸಲಾದ ವಸತಿ ಗೃಹಗಳ ಉದ್ಘಾಟನೆಯನ್ನು ಸಣ್ಣ ಕೈಗಾರಿಕೆ, ಮುಜರಾಯಿ, ಸಕ್ಕರೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಸೋಮವಾರ ನೆರವೇರಿಸಿದರು. ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಎಸ್ಪಿ ಎನ್. ಶಶಿಕುಮಾರ, ಜಿಪಂ ಸಿಇಒ ಉಮೇಶ ಕುಸುಗಲ್ಲ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಡಾ೤ ಶಿವಪುತ್ರಪ್ಪ, ಉಪಕಾರ್ಯದರ್ಶಿ ಗೋವಿಂದಸ್ವಾಮಿ, ಮುಖ್ಯ ಯೋಜನಾಧಿಕಾರಿ ಬಸನಗೌಡ್ರ, ಯೋಜನಾ ನಿರ್ದೇಶಕ ಪಿ.ವೈ. ಶಿರಹಟ್ಟಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.