ಹುಬ್ಬಳ್ಳಿ-ಶಿಗ್ಗಾಂವಿ ಮಧ್ಯೆ ಸಿಟಿ ಬಸ್
ಶಿಗ್ಗಾಂವಿ: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕೆ ಶಿಗ್ಗಾಂವಿ-ಹುಬ್ಬಳ್ಳಿ ಮಧ್ಯೆ ಸಿಟಿ ಬಸ್ ಸಂಚಾರ ಆರಂಭಿಸಬೇಕು ಎಂದು ಶಾಸಕ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ವಾಯವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಕಾಂಕ್ರೀಟ್ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಗ್ಗಾಂವಿ ಈಗ ಪ್ರವಾಸಿಗರ ಆಕರ್ಷಣೆಯ ಕೇಂದ್ರ. ಗೊಟಗೋಡಿ ಜಾನಪದ ವಿಶ್ವವಿದ್ಯಾಲಯ. ರಾಕ್ ಗಾರ್ಡನ್, ಬಾಡ ಗ್ರಾಮದ ಕನಕದಾಸರ ಕೋಟೆ, ಶಿಶುವಿನಾಳ ಶರೀಫ ಶಿವಯೋಗಿಗಳ ಗದ್ದುಗೆಗೆ ಪ್ರವಾಸಿಗರು ಬರುತ್ತಿದ್ದಾರೆ. ಹುಬ್ಬಳ್ಳಿ-ಶಿಗ್ಗಾಂವಿ ಮಧ್ಯೆ ಸಿಟಿ ಬಸ್ಗಳ ಅಗತ್ಯವಿದೆ. ಶಿಗ್ಗಾಂವಿ ಬಸ್ ನಿಲ್ದಾಣಕ್ಕೆ ಪ್ರತಿ ದಿನ 470ಕ್ಕೂ ಹೆಚ್ಚು ಬಸ್ಗಳು ಬಂದು ಹೋಗುತ್ತವೆ. ರು. 1.20 ಕೋಟಿ ಅನುದಾನದಲ್ಲಿ ಬಸ್ ನಿಲ್ದಾಣವನ್ನು ಸಂಪೂರ್ಣ ಕಾಂಕ್ರೀಟ್ ಮಾಡಲು ಶಂಕುಸ್ಥಾಪನೆ ಮಾಡಲಾಗಿದೆ ಎಂದರು. ಹುಲಗೂರು, ತಡಸ ಬಸ್ ನಿಲ್ದಾಣಗಳ ಕಾಮಗಾರಿ ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ. ಪ್ರಯಾಣಿಕರಿಗೆ ಒಳ್ಳೆಯ ಸೌಲಭ್ಯ ಕೊಡಬೇಕು. ಈ ಹಿನ್ನೆಲೆಯಲ್ಲಿ ಅರ್ಧ ಗಂಟೆಗೆ ಒಂದರಂತೆ ಹುಬ್ಬಳ್ಳಿ-ಶಿಗ್ಗಾಂವಿ ಮಧ್ಯೆ ಸಿಟಿ ಬಸ್ ಬಿಡಬೇಕು ಎಂದು ಸೂಚಿಸಿದರು.
ಶಂಕುಸ್ಥಾಪನೆ ನೆರವೇರಿಸಿದ ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಹುಬ್ಬಳ್ಳಿಯಿಂದ ಜನತೆ ಗೊಟಗೋಡಿ, ಬಾಡ ಅರಮನೆ ಮುಂತಾದ ಕಡೆಗೆ ಬರುತ್ತಿದ್ದಾರೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಸಿಟಿ ಬಸ್ ಅಗತ್ಯವಿದೆ ಎಂದರು.
ವಾಕರಸಾ ಸಂಸ್ಥೆ ಹಾವೇರಿ ವಿಭಾಗದ ಡಿಸಿ ಶಾಂತಪ್ಪ. ಎಕ್ಸಿಕ್ಯೂಟಿವ್ ರವಿಶಂಕರ, ತಾಲೂಕು ಬಿಜೆಪಿ ಅಧ್ಯಕ್ಷ ದೇವಣ್ಣ ಚಾಕಲಬ್ಬಿ. ಜಿಪಂ ಸದಸ್ಯ ಬಿ.ಟಿ. ಇನಾಮತಿ, ತಾಪಂ ಅಧ್ಯಕ್ಷೆ ಸುಜಾತಾ ಕಲಕಟ್ಟಿ, ಸದಸ್ಯರಾದ ಶಾಂತಮ್ಮ ಬೊಮ್ನಳ್ಳಿ, ಸುಗಂಧಾಬಾಯಿ ಘೋಡಕೆ, ಪುರಸಭೆ ಸದಸ್ಯ ಪರಶುರಾಮ ಸೊನ್ನದ, ಶಿವಪ್ರಸಾದ ಸುರಗಿಮಠ, ಸುಭಾಷ ಚವ್ಹಾಣ, ಗಂಗಣ್ಣ ಸಾತಣ್ಣವರ ಇದ್ದರು. ನವೀನ ಸವಣೂರ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

