ಗ್ರಾಮೀಣ ಭಾಗಕ್ಕೆ ಹೆಚ್ಚಿನ ಬಸ್ ಸೌಕರ್ಯ: ಬೊಮ್ಮಾಯಿ
ಶಿಗ್ಗಾಂವಿ: ಗ್ರಾಮೀಣ ಸಾರಿಗೆ ಸಮಸ್ಯೆ ದೂರ ಮಾಡಲು ಹೆಚ್ಚಿನ ಬಸ್ ಸೌಕರ್ಯ ಕಲ್ಪಿಸಲು ಸರ್ಕಾರ ಮುಂದಾಗಿದೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ತಾಲೂಕಿನ ಬಂಕಾಪುರ ಪಟ್ಟಣದ ಬಸ್ ನಿಲ್ದಾಣದ ಕಾಂಕ್ರೀಟ್ ನಿರ್ಮಾಣ ಕಾಮಗಾರಿಗೆ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದ ಅವರು, ಹಿಂದಿನ ಸರ್ಕಾರದಲ್ಲಿ ಸುಸಜ್ಜಿತ, ಭವ್ಯ ಬಸ್ ನಿಲ್ದಾಣ ನಿರ್ಮಾಣವಾಗಿದೆ. ಈಗ ಕಾಂಕ್ರೀಟ್ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ಮತ್ತು ನಗರ ಮಾರ್ಗದ ಬಸ್ಗಳ ನಿಲುಗಡೆ ಒಂದೇ ಕಡೆ ಇರುವ ಕಾರಣ, ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದೆ. ಗ್ರಾಮೀಣ ಮಾರ್ಗದ ಸಾರಿಗೆ ಬಸ್ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ಬಂಕಾಪುರ ಪಟ್ಟಣ ಬೆಳವಣಿಗೆ ಹೊಂದುತ್ತಿದ್ದು, ಹಾವೇರಿ, ಹುಬ್ಬಳ್ಳಿ ಹಾಗೂ ಹಾನಗಲ್ ನಗರಗಳಿಗೆ ಕೇಂದ್ರ ಸ್ಥಾನವಾಗಿದೆ. ವಿದ್ಯಾರ್ಥಿಗಳು ಹಾಗೂ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ರಾಷ್ಟ್ರೀಯ ಹೆದ್ದಾರಿ ಪಕ್ಕ ವಿನಂತಿ ಮೇರೆಗೆ ಬಸ್ ನಿಲುಗಡೆ ಮಾಡಬೇಕು ಎಂದು ಸಾರಿಗೆ ಸಂಸ್ಥೆ ಅಧಿಕಾರಿಗಳಿಗೆ ಸೂಚಿಸಿದರು.
ಹುಬ್ಬಳ್ಳಿ ಸಾರಿಗೆ ಅಧಿಕಾರಿ ಟಿ.ವೈ. ಗಡಾದ, ಸಂಚಾರ ಅಧಿಕಾರಿ ವಿ.ಸಿ. ಪಾಟೀಲ, ಬಿಜೆಪಿ ಅಧ್ಯಕ್ಷ ದೇವಣ್ಣ ಚಾಕಲಬ್ಬಿ, ತಾಪಂ ಅಧ್ಯಕ್ಷೆ ಸುಜಾತಾ ಕಲ್ಲಕಟ್ಟಿ, ಪುರಸಭೆ ಸದಸ್ಯರಾದ ಹೊನ್ನಪ್ಪ ಹೂಗಾರ, ಚನ್ನಪ್ಪ ಹಳವಳ್ಳಿ, ಸುನೀತಾ ಬೆಟಗೇರಿ, ಮಾಲತೇಶ ಬಾಬುಸಿಂಗನವರ, ಸತೀಶ ವನಹಳ್ಳಿ, ಬಿಜೆಪಿ ತಾಲೂಕು ಘಟಕದ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ನಾರಾಯಣಪುರ, ಬಾಪುಗೌಡ್ರ ಪಾಟೀಲ, ವಿಶ್ವನಾಥ ಹರವಿ, ರಾಘವೇಂದ್ರ ಮೇಲಗೇರಿ, ಮಂಜುನಾಥ ಕೂಲಿ, ರಮೇಶ ಸುಲಾಖೆ, ಅಂಬರೀಷ ಸರ್ವದೆ ಇದ್ದರು. ಲಿಂಗರಾಜ ಹಳವಳ್ಳಿ ನಿರೂಪಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

