ಹಾವೇರಿ

31ರಂದು ಕೆಪಿಡಿ ಸಭೆ

Published On :

ಹಾವೇರಿ: ಹಾವೇರಿ ತಾಲೂಕು ಪಂಚಾಯತ್ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಶಾಸಕ ರುದ್ರಪ್ಪ ಲಮಾಣಿ ಅವರ ಅಧ್ಯಕ್ಷತೆಯಲ್ಲಿ ಅ. 31ರಂದು ಬೆಳಗ್ಗೆ 11 ಗಂಟೆಗೆ ತಾಪಂ ಸಭಾಭವನದಲ್ಲಿ ಜರುಗಲಿದೆ ಎಂದು ತಾಪಂ ಇಒ ಹಾಗೂ ಕರ್ನಾಟಕ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ರಾಜ್ಯೋತ್ಸವಕ್ಕೆ ಸಿದ್ಧತೆ
ಹಾವೇರಿ: ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನ. 1ರಂದು ಬೆಳಗ್ಗೆ 9 ಗಂಟೆಗೆ ಸಾರ್ವಜನಿಕ ಧ್ವಜಾರೋಹಣ ನಡೆಯಲಿದೆ. ಬೆಳಗ್ಗೆ 8.15ಕ್ಕೆ ನಗರದ ಮೈಲಾರ ಮಹದೇವ ವೃತ್ತದಿಂದ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ಆರಂಭಗೊಂಡು, 9 ಗಂಟೆಗೆ ಜಿಲ್ಲಾ ಕ್ರೀಡಾಂಗಣ ತಲುಪುತ್ತದೆ. ಅಲ್ಲಿ ಸಣ್ಣ ಕೈಗಾರಿಕೆ, ಮುಜರಾಯಿ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸುವರು. ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಶಿವಕುಮಾರ ಉದಾಸಿ, ಪ್ರಹ್ಲಾದ ಜೋಶಿ, ಶಾಸಕರಾದ ಕೆ.ಬಿ. ಕೋಳಿವಾಡ, ಮನೋಹರ ತಹಶೀಲ್ದಾರ, ಬಸವರಾಜ ಶಿವಣ್ಣನವರ, ಬಸವರಾಜ ಬೊಮ್ಮಾಯಿ, ಯು.ಬಿ.ಬಣಕಾರ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಸೋಮಣ್ಣ ಬೇವಿನಮರದ, ನಾಗರಾಜ ಛಬ್ಬಿ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ನಗರಸಭೆ ಅಧ್ಯಕ್ಷ ಇಮಾಮ್ ಜಾಫರಖಾನ ಪಠಾಣ ಪಾಲ್ಗೊಳ್ಳುವರು. ಅಂದು ಸಂಜೆ 6 ಗಂಟೆಗೆ ನಗರದ ಜಿಲ್ಲಾ ಗುರುಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ತಿಳಿಸಿದ್ದಾರೆ.
ಯಕ್ಷಗಾನ ಕಲಿಕಾ ಕಮ್ಮಟ
ಹಾವೇರಿ: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ತಂಜಾವೂರಿನ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರದ ಸಹಯೋಗದಲ್ಲಿ 'ಯಕ್ಷಗಾನ ಕಲಿಕಾ ಕಮ್ಮಟ' ಏರ್ಪಡಿಸಲು ಉದ್ದೇಶಿಸಿದೆ. ಈ ಕಮ್ಮಟದಲ್ಲಿ ತರಬೇತಿ ಪಡೆಯಲಿಚ್ಛಿಸುವ 15ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ನ. 15ರೊಳಗೆ ಅರ್ಜಿ ಸಲ್ಲಿಸಬಹುದು. 15 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ. ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ದೂರವಾಣಿ/ಮೊಬೈಲ್ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ ಇತ್ಯಾದಿ ವಿವರಗಳೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು-560002ಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ದೂ. 080-22113146 ಸಂಪರ್ಕಿಸಿ.
ಶಿವಪ್ಪ ಸಣ್ಣಪೂಜಾರ ನಿಧನ
ಶಿಗ್ಗಾಂವಿ: ಕುರಬರ ಮಲ್ಲೂರ ಗ್ರಾಮದ ನಿವಾಸಿ ಶಿವಪ್ಪ ದೊಡ್ಡಫಕ್ಕೀರಪ್ಪ ಸಣ್ಣಪೂಜಾರ (69) ಸೋಮವಾರ ನಿಧನರಾಗಿದ್ದಾರೆ. ಅವರಿಗೆ ಇಬ್ಬರು ಪುತ್ರಿಯರು, ಮೂವರು ಪುತ್ರರು ಇದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.