ತಾಂಡಾ ಮಕ್ಕಳಿಗೆ ಶಿಕ್ಷಣ
ರಾಣಿಬೆನ್ನೂರು: ಬಡತನ, ಇತರ ಕಾರಣಗಳಿಂದ ಉದ್ಯೋಗ ಅರಸಿ ವಲಸೆ ಹೋಗುತ್ತಿರುವ ಲಂಬಾಣಿಗರ ಮತ್ತು ಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಸರ್ಕಾರ, ಸರ್ವ ಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ 6 ತಿಂಗಳು ವಸತಿಯುವ ಋತುಮಾನ ಶಾಲೆ ಆರಂಭಿಸಿದೆ ಎಂದು ಅರುಣೋದಯ ಸಂಸ್ಥೆಯ ಕಾರ್ಯದರ್ಶಿ ಹೊನ್ನಮ್ಮ ಚಂದಾಪುರ ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ರಾಹುತನಕಟ್ಟಿ ಅರುಣೋದಯ ಶಿಕ್ಷಣ ಆರೋಗ್ಯ ಮತ್ತು ಕೃಷಿ ಅಭಿವೃದ್ಧಿ ಸ್ವಯಂಸೇವಾ ಸಂಸ್ಥೆ ಆಶ್ರಯದಲ್ಲಿ ಮೇಡ್ಲೆರಿ ತಾಂಡಾದ ಸಕಿಪ್ರಾ ಶಾಲೆಯಲ್ಲಿ ಋತುಮಾನ ಶಾಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
7 ತಾಂಡಾಗಳಲ್ಲಿ: ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಿಂದ ವರ್ಷದ ಆರೇಳು ತಿಂಗಳು ಜನ ದುಡಿಯಲು ಬೇರೆ ಜಿಲ್ಲೆಗಳಿಗೆ ಗುಳೆ ಹೋಗುತ್ತಾರೆ. ಈ ಅವಧಿಯಲ್ಲಿ ಅಂಥವರ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಮಕ್ಕಳಿಗೆ ವಸತಿಯುತ ಋತುಮಾನ ಶಾಲೆ ತೆರೆಯಲು ಸರ್ಕಾರದಿಂದ ಮಾನ್ಯತೆ ಪಡೆದಿರುವ ಖಾಸಗಿ ಸ್ವಯಂ ಸೇವಾ ಸಂಸ್ಥೆಗೆ ಆದೇಶಿಸಿರುವ ಕಾರಣ ಮೇಡ್ಲೆರಿ ಲಂಬಾಣಿ ತಾಂಡಾದಲ್ಲಿ 20 ಮಕ್ಕಳಿಗೆ ಶಾಲೆ ಆರಂಭಿಸಿದ್ದೇವೆ. ರಾಣಿಬೆನ್ನೂರು ತಾಲೂಕಿನಲ್ಲಿ ಗರಿಷ್ಠ ಸಂಖ್ಯೆಯ ಲಂಬಾಣಿ ತಾಂಡಾಗಳಿದ್ದು, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗುಡಗೂರು, ಹನುಮಾಪುರ, ಶ್ರೀನಿವಾಸಪುರ, ನೂಕಾಪುರ, ಪದ್ಮಾವತಿಪುರ, ಐರಣಿ ಸೇರಿ 7 ತಾಂಡಾಗಳಲ್ಲಿ ಋತುಮಾನ ಶಾಲೆ ಆರಂಭಿಸಿದ್ದೇವೆ ಎಂದರು.
ಋತುಮಾನ ಶಾಲೆಗಳಲ್ಲಿ ಓದುವ ಮಕ್ಕಳನ್ನು ಇಟ್ಟಿಗೆ ಭಟ್ಟಿಗಳ ಮಾಲೀಕರು ಮತ್ತು ಕಮೀಷನ್ ಏಜೆಂಟರು ಆಮಿಷ ತೋರಿಸಿ ಕೆಲಸಕ್ಕೆ ಕರೆದೊಯ್ಯುತ್ತಿದ್ದು, ಮಕ್ಕಳನ್ನು ದುಡಿಸಿಕೊಳ್ಳುವ ಹೀನಕೃತ್ಯಕ್ಕೆ ಪಾಲಕರು ಪ್ರೋತ್ಸಾಹ ನೀಡಬಾರದು. ಕಲಿಯಲು ಅವಕಾಶ ನೀಡಬೇಕೆಂದು ಹೊನ್ನಮ್ಮ ಮನವಿ ಮಾಡಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪುಟ್ಟಪ್ಪ ಲಮಾಣಿ ಋತುಮಾನ ಶಾಲೆಗಳ ಪ್ರಾರಂಭೋತ್ಸವಕ್ಕೆ ಚಾಲನೆ ನೀಡಿ, ಹಿಂದುಳಿದವರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ತಿಳಿಸಿದರು.
ಎಸ್ಡಿಎಂಸಿ ಅಧ್ಯಕ್ಷ ಶಿವಪ್ಪ ಲಮಾಣಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವೆಂಕಪ್ಪ ಲಮಾಣಿ, ಗ್ರಾಪಂ ಸದಸ್ಯರಾದ ಬೀರಪ್ಪ ಲಮಾಣಿ, ಹೇಮಪ್ಪ ಲಮಾಣಿ, ನಾಗಪ್ಪ ಲಮಾಣಿ, ಶಾಲೆಯ ಪ್ರಧಾನ ಗುರುಗಳಾದ ಎಚ್.ಟಿ. ಹರಿಹರ, ಪ್ರಭು ಚೌಡಕ್ಕಳವರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

