ಕೃಷಿ, ನೀರಾವರಿಗೆ ಆದ್ಯತೆ: ತಹಶೀಲ್ದಾರ
ಕನ್ನಡಪ್ರಭ ವಾರ್ತೆ, ಹಾನಗಲ್ಲ, ಅ. 30
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೂಪಿಸಿ ಜಾರಿಗೆ ತಂದಿರುವ ಜಲಸಂವರ್ಧನೆ ಯೋಜನೆಯಲ್ಲಿ ಪ್ರತಿ ಗ್ರಾಪಂ ವ್ಯಾಪ್ತಿಯ ಎರಡು ಕೆರೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಶಾಸಕ ಮನೋಹರ ತಹಶೀಲ್ದಾರ ತಿಳಿಸಿದರು.
ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಎನ್ಆರ್ಐಜಿ ಯೋಜನೆಯಡಿ ರು. 1.50 ಲಕ್ಷ ವೆಚ್ಚದಲ್ಲಿ ಕೊರಮಗಟ್ಟಿ ಕೆರೆ ಹೂಳೆತ್ತಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿದ ಅವರು, ಕೃಷಿಗೆ ಒತ್ತು ನೀಡಬೇಕಾಗಿದೆ. ರಸ್ತೆ, ದೇವಾಲಯ ನಿರ್ಮಿಸಲು ಸಾರ್ವಜನಿಕರು ಹೆಚ್ಚಿನ ಅನುದಾನ ಅಪೇಕ್ಷಿಸುತ್ತಾರೆ. ಈ ಹಂತದಲ್ಲಿ ಕೃಷಿ, ನೀರಾವರಿಗೆ ಆದ್ಯತೆ ನೀಡಲು ಕೃಷಿಕ ಸಮುದಾಯ ಮುಂದಾಗಬೇಕು. ಹಾವೇರಿ ಜಿಲ್ಲೆಯಲ್ಲಿ 100 ಕೆರೆಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಯೋಜನೆಗಳನ್ನು ಸರಿಯಾಗಿ ಬಳಸಿಕೊಳ್ಳಲು ಸಾರ್ವಜನಿಕರೂ ಕಾಳಜಿ ವಹಿಸಬೇಕು ಎಂದರು.
ಜಿಪಂ ಸದಸ್ಯ ಪದ್ಮನಾಭ ಕುಂದಾಪುರ ಮಾತನಾಡಿ, ಎನ್ಆರ್ಇಜಿ ಕಾಮಗಾರಿಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಅಧಿಕಾರಿಗಳ ಇಚ್ಛಾಶಕ್ತಿ ಮುಖ್ಯ. ಕಾಮಗಾರಿಗಳ ವಿಷಯದಲ್ಲಿ ತಪ್ಪು ಮಾಹಿತಿ ನೀಡದೆ, ಯೋಜನೆಗಳನ್ನು ಸಕಾಲಿಕವಾಗಿ ಪೂರ್ಣಗೊಳಿಸಲು ಮುಂದಾಗಬೇಕು. ಕೆರೆ ಅಭಿವೃದ್ಧಿ ಮಾಡಿ, ನೀರು ತುಂಬಿಸುವ ಕಾರ್ಯ ಆರಂಭವಾದಲ್ಲಿ ರೈತರಿಗೆ ಹೆಚ್ಚು ಅನುಕೂಲ ಎಂದು ತಿಳಿಸಿದರು.
ತಾಪಂ ಅಧ್ಯಕ್ಷ ಮಲ್ಲನಗೌಡ ವೀರನಗೌಡ್ರ, ಜಿಪಂ ಸದಸ್ಯ ಮಹದೇವಪ್ಪ ಬಾಗಸರ, ಗ್ರಾಪಂ ಅಧ್ಯಕ್ಷೆ ರಾಮಲ್ಬಿ ಬುಡ್ನಾನವರ, ಸೋಗಾಜಿ ಪುರೋಹಿತ, ಯಾಸಿರ್ಖಾನ ಪಠಾಣ, ರವಿಕುಮಾರ ಬೆಲ್ಲದ, ಗುಡ್ಡಪ್ಪ ಗೋಯಿಕಾಯಿ, ಎಂ.ಜಿ. ಮುಲ್ಲಾ ಪಾಲ್ಗೊಂಡಿದ್ದರು. ಶಿಕ್ಷಕ ಎಂ.ಎನ್. ಚಿಲಕವಾಡ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

