ಹಾವೇರಿ

ಸಮರ್ಪಕ ವಿದ್ಯುತ್ ಪೂರೈಕೆ ಆಗ್ರಹಿಸಿ ರೈತರಿಂದ ಮನವಿ

Published On :

ಹಾನಗಲ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾನಗಲ್ಲ ಘಟಕದ ಪದಾಧಿಕಾರಿಗಳು, ರೈತರಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಹೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಅವರಿಗೆ ಮನವಿ ಅರ್ಪಿಸಿದರು.
ಸಂಘಟನೆಯ ಕಾರ್ಯದರ್ಶಿ ಅಡಿವೆಪ್ಪ ಆಲದಕಟ್ಟಿ ಮಾತನಾಡಿ, ರೈತರ ಅಕ್ರಮ ಪಂಪ್‌ಸೆಟ್‌ಗಳನ್ನು ಸಕ್ರಮಗೊಳಿಸಿ ಆರ್.ಆರ್ ನಂಬರ್ ನೀಡಬೇಕು. ಹಳೆಯ ಟ್ರಾನ್ಸ್‌ಫಾರ್ಮರ್‌ಗಳಿಗೆ ಅಳವಡಿಸಿದ ಕಂಬಗಳು ಹಾಗೂ ತಂತಿಗಳು ಶಿಥಿಲಗೊಂಡಿದ್ದು, ಅವುಗಳನ್ನು ಬದಲಿಸಿ ಹೊಸದಾಗಿ ಅಳವಡಿಸಬೇಕು. ಒಂದು ಟಿಸಿಗೆ 15 ಕೊಳವೆ ಬಾವಿಗಳಿದ್ದು, ಆಗಾಗ್ಗೆ ಟಿಸಿ ಹಾಳಾಗುತ್ತಿದ್ದು, ಅದಕ್ಕಾಗಿ ಹೆಚ್ಚುವರಿ ಟಿಸಿ ಅಳವಡಿಸಬೇಕು. ರೈತರ ಕೃಷಿ ಚಟುವಟಿಕೆಗೆ 10 ಗಂಟೆ ವಿದ್ಯುತ್ ಪೂರೈಸಬೇಕು. ಸುಟ್ಟುಹೋದ ಟಿಸಿಗಳನ್ನು ಎರಡು ದಿನಗಳೊಳಗೆ ಸರಿಪಡಿಸಿ ರೈತರಿಗೆ ತೊಂದರೆಯಾಗದಂತೆ ಅಳಡಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನದಲ್ಲಿ ತಾಲೂಕಿನಾದ್ಯಂತ ರೈತರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದರು.
ಸಂಘದ ಅಧ್ಯಕ್ಷ ಮಾಲಿಂಗಪ್ಪ ಅಕ್ಕಿವಳ್ಳಿ, ಕಾರ್ಯದರ್ಶಿ ಅಡಿವೆಪ್ಪ ಆಲದಕಟ್ಟಿ, ಸಂಚಾಲಕ ಚನ್ನಬಸಪ್ಪ ಅಕ್ಕಿವಳ್ಳಿ, ಸಂಘಟನಾ ಕಾರ್ಯದರ್ಶಿ ಗುಲಾಬಸಾಬ ಬಡಗಿ, ವಾಸುದೇವ ಕಮಾಟಿ, ರೈತ ಮುಖಂಡ ರಾಘವೇಂದ್ರ ಹೊಸಕೊಪ್ಪ, ಮಲ್ಲಪ್ಪ ಪರಪ್ಪನವರ, ಮಂಜು ಹೊಸಕೊಪ್ಪ, ಗಂಗಯ್ಯ ಅಕ್ಕಿವಳ್ಳಿ, ಬಸವರಾಜ ಗದ್ದಿಕೇರಿಮಠ, ಪ್ರಭು ಕೋಟಿಮನಿ, ಎಂ.ಎಂ. ಕಮ್ಮಾರ, ಪ್ರವೀಣ ಕೋಟೀಮನಿ, ಶಿವನಗೌಡ ಹಕ್ಲಣ್ಣನವರ, ಎಂ.ಬಿ. ಕೋಡೀಹಳ್ಳಿ, ಬಸವಂತ ಕಾನಮನಿ ಮುಂತಾದವರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.