ಜಾತಿ ರಾಜಕಾರಣ ನಡೆಯಲ್ಲ
ಶಿಗ್ಗಾಂವಿ: ಜಾತಿ ಮಧ್ಯೆ ವೈಮನಸ್ಸು ಹುಟ್ಟು ಹಾಕಿ ರಾಜಕಾರಣ ಮಾಡುತ್ತಿರುವ ಬಿಜೆಪಿಯವರಿಗೆ ಈ ಸಲ ಜಾತಿ ರಾಜಕಾರಣ ನಡೆಯೋದಿಲ್ಲ ಎಂದು ಧಾರವಾಡ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಲಕರ್ಣಿ ಹೇಳಿದರು.
ತಾಲೂಕಿನ ತಡಸ ಗ್ರಾಮದಲ್ಲಿ ಜರುಗಿದ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ನನಗೆ ಈ ಚುನಾವಣೆ ಹೊಸದಲ್ಲ. ರಾಜ್ಯ ಹಾಗೂ ಕೇಂದ್ರ ಸರ್ಕಾರವು ಹಲವಾರು ಅಭಿವೃದ್ಧಿ ಪರವಾದ ಕೆಲಸ ಮಾಡಲು ಕಾಂಗ್ರೆಸ್ಗೆ ಮತ ನೀಡಬೇಕು ಎಂದರು. ಮಾಜಿ ಸಚಿವ ಪಿ.ಸಿ. ಸಿದ್ದನಗೌಡ ಮಾತನಾಡಿದರು. ಮಾಜಿ ಶಾಸಕ ಸೈಯ್ಯದ ಅಜ್ಜಂಪೀರ ಖಾದ್ರಿ ಮಾತನಾಡಿ, ಧಾರವಾಡ ಕ್ಷೇತ್ರದಿಂದ ಎರಡು ಬಾರಿ ಲೋಕಸಭೆಗೆ ಚುನಾಯಿತರಾದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ಅಭಿವೃದ್ಧಿಯಲ್ಲಿ ಶಿಗ್ಗಾಂವಿ ಕ್ಷೇತ್ರವನ್ನು ಕಡೆಗಣಿಸಿದ್ದಾರೆ ಎಂದು ದೂರಿದರು. ಹೈಟೇಕ್ ರಾಜಕಾರಣ ಮಾಡುವ ಸಂಸದ ಜೋಶಿ ಜನಸಾಮಾನ್ಯರ ಕೈಗೆ ಸಿಗುವುದೇ ಅಪರೂಪ ಎಂದು ವ್ಯಂಗ್ಯ ವಾಡಿದರು. ರಾಜ್ಯ ಸರ್ಕಾರದ ಸಾಧನೆ ನೋಡಿ ಈ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಪರ ಮತ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಪ ಸದಸ್ಯ ಶ್ರೀನಿವಾಸ ಮಾನೆ, ಕಾಂಗ್ರೆಸ್ ಅಧ್ಯಕ್ಷ ಎಂ.ಎನ್. ವೆಂಕೋಜಿ, ಶಿವಾನಂದ ಬಾಗೂರ, ಸಿ.ಎಸ್. ನಡುವಿನಮನಿ, ಬಸವಂತಪ್ಪ ಸೋಲಬಕ್ಕನವರ, ಡಿ.ಎಸ್. ಧರನೇಪ್ಪನವರ ಎಸ್.ಎಫ್. ಮಣಕಟ್ಟಿ, ಸೇರಿದಂತೆ ಹಲವರು ಮಾತನಾಡಿದರು. ಗುಡ್ಡಪ್ಪ ಜಲದಿ, ಪ್ರಕಾಶ ಬಂಕಣ್ಣವರ, ಎಫ್. ಎಸ್. ಪಾಟೀಲ, ಎಂ.ಎಂ. ತಡಸ, ಜಬ್ಬರ್ ಪಠಾಣ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಹನುಮರಡ್ಡಿ ನಡುವಿನಮನಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

