ಹಾವೇರಿ

ಬಿಜೆಪಿ ಅಲೆಯಿಲ್ಲ, ಕಾಂಗ್ರೆಸ್‌ಗೆ ನೆಲೆಯಿಲ್ಲ

Published On :

ಹಾವೇರಿ:  ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇರೆ ಜಿಲ್ಲೆಯಿಂದ ಚುನಾವಣೆಗಾಗಿ ಇಲ್ಲಿಗೆ ವಲಸೆ ಬಂದಿದ್ದಾರೆ. ಅವರಿಗೆ ನೆಲೆ ಸಿಗದಂತೆ ಮಾಡಿ. ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಸ್ವಾರ್ಥ ರಾಜಕಾರಣಿಯಾಗಿದ್ದು, ಅವರಿಗೆ ಮತ್ತೊಮ್ಮೆ ಅವಕಾಶ ಕೊಡಬೇಡಿ ಎಂದು ಜೆಡಿಎಸ್ ಅಭ್ಯರ್ಥಿ ರವಿ ಮೆಣಸಿನಕಾಯಿ ಹೇಳಿದರು.
ಜಿಲ್ಲೆಯ ಹಾನಗಲ್ಲ ನಗರದಲ್ಲಿ ಶುಕ್ರವಾರ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ಅಲೆಯೂ ಇಲ್ಲ. ಕಾಂಗ್ರೆಸ್‌ಗೆ ನೆಲೆಯೇ ಇಲ್ಲದಂತಾಗಿದೆ. ಜೆಡಿಎಸ್‌ಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸ್ಥಳೀಯರಿಗೆ ಮಾತ್ರ ಇಲ್ಲಿಯ ಸಮಸ್ಯೆ ಗೊತ್ತಿರುತ್ತದೆ. ಆದ್ದರಿಂದ ಈ ಬಾರಿ ಜೆಡಿಎಸ್‌ಗೆ ಮತ ಕೊಟ್ಟು ನನ್ನನ್ನು ಗೆಲ್ಲಿಸಿದರೆ ಜನರ ಕಷ್ಟ, ನಷ್ಟಗಳಿಗೆ ಸ್ಪಂದಿಸುತ್ತೇನೆ ಎಂದರು.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಮಾಡಿದ ಕೆಲಸಗಳು ನಮಗೆ ಶ್ರೀರಕ್ಷೆಯಾಗಲಿದೆ. ಲೋಕಸಭೆಯಲ್ಲಿ ತೃತೀಯರಂಗ ಅಸ್ತಿತ್ವಕ್ಕೆ ಬರಲಿದೆ. ಆಗ ದೇವೇಗೌಡರು ಮತ್ತೊಮ್ಮೆ ಪ್ರಧಾನಮಂತ್ರಿಯಾಗುವುದು ನಿಶ್ಚಿತ ಎಂದರು.
ಹಾನಗಲ್ಲ ತಾಲೂಕು ಜೆಡಿಎಸ್ ಅಧ್ಯಕ್ಷ ಶಿವಲಿಂಗಪ್ಪ ಮಾತನಾಡಿ, ಕಾಂಗ್ರೆಸ್ ಹಾಗೂ ಬಿಜೆಪಿಯವರು ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಆದರೆ, ಅವರಿಗೆ ಮಾತನಾಡುವ ನೈತಿಕ ಹಕ್ಕು ಇಲ್ಲ. ಅವರು ಕ್ಷಮೆಯಾಚಿಸಬೇಕು ಎಂದರು.
ಮತಯಾಚನೆಗೂ ಮುನ್ನ ಕುಮಾರೇಶ್ವರ ಮಠದಲ್ಲಿ ಪೂಜೆ ಸಲ್ಲಿಸಿ ಸಾವಿರಾರು ಕಾರ್ಯಕರ್ತರೊಂದಿಗೆ ಪಟ್ಟಣದಲ್ಲಿ ಪಾದಯಾತ್ರೆ ಮೂಲಕ ಮತಯಾಚಿಸಿದರು. ರಾಜ್ಯ ಕಾರ್ಯದರ್ಶಿ ಡಿ.ಎಸ್. ಮಾಳಗಿ, ಮುಖಂಡರಾದ ಪರಮೇಶಪ್ಪ ಮೇಗಳಮನಿ, ಉಮೇಶ ತಳವಾರ, ತಾಜ್‌ಮೋಹದ್ದೀನ್ ಅಣ್ಣಿಗೇರಿ, ಫಾಶಾ ಗಾವಂಕರ, ಬಣಕಾರ ವಕೀಲರು, ಶಿವಣ್ಣ ಹೂಗಾರ, ಸಿದ್ದಪ್ಪ ಹೂಗಾರ, ನಾಗರಾಜ ಸೊಂಟನವರ, ರಮಾ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.