ಹಾವೇರಿ

ಬಿಜೆಪಿ ಕಾರ್ಯಕರ್ತರಿಂದ ಪ್ರಚಾರ

Published On :

ಹಾವೇರಿ:  ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪಕ್ಷದ ಅಭ್ಯರ್ಥಿ ಶಿವಕುಮಾರ ಉದಾಸಿ ಪರವಾಗಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಕೋಡ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಮವಾರ ಬಿರುಸಿನ ಪ್ರಚಾರ ನಡೆಸಿದರು. ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರದೀಪ ಮುಳ್ಳೂರ, ತಾಲೂಕು ಅಧ್ಯಕ್ಷ ರುದ್ರೇಶ ಕೊಣವರ ನೇತೃತ್ವದಲ್ಲಿ ಕಾರ್ಯಕರ್ತರು ಮನೆಮನೆಗೆ ತೆರಳಿ ಕಾಂಗ್ರೆಸ್ ಸರ್ಕಾರದ ದುರಾಡಳಿತ ಹಾಗೂ ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ತಿಳಿಸುತ್ತ ಚುನಾವಣೆಯಲ್ಲಿ ಶಿವಕುಮಾರ ಉದಾಸಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಅಲ್ಲದೇ ನರೇಂದ್ರ ಮೋದಿ ಗುಜರಾತ್ ರಾಜ್ಯದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯವೈಖರಿ ಬಗ್ಗೆ ಜನರಿಗೆ ಮನನ ಮಾಡಿಕೊಡುವ ಮೂಲಕ ಭವ್ಯ ಭಾರತದ ನಿರ್ಮಾಣಕ್ಕೆ ಯುವಕರು ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಬಿಜೆಪಿ ಕಮಲದ ಗುರುತಿಗೆ ಮತನೀಡಬೇಕು ಎಂದು ಮನವಿ ಮಾಡಿದರು. ಬಿಜೆಪಿ ಹಿರೆಕೇರೂರ ತಾಲೂಕು ಅಧ್ಯಕ್ಷ ಎಸ್.ಆರ್. ಅಂಗಡಿ, ಜಿಪಂ ಸದಸ್ಯೆ ಬಸಮ್ಮ ಅಬಲೂರ ಸೇರಿದಂತೆ ಇತರರು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.