ಹಾವೇರಿ

ಗ್ರಾಮಾಭಿವೃದ್ಧಿಗೆ ಯುಪಿಎ ಕೊಡುಗೆ ಅಪಾರ: ಕೃಷ್ಣ

Published On :

ರಾಣಿಬೆನ್ನೂರು:  ಕಾಂಗ್ರೆಸ್ ಸರ್ಕಾರ ದೇಶದ ಅಭಿವೃದ್ಧಿಗಾಗಿ ನೀಡಿರುವ ಕೊಡುಗೆ ಅಪಾರ. 10 ವರ್ಷಗಳಲ್ಲಿ ಗ್ರಾಮಾಂತರ ಮತ್ತು ನಗರ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ ಯುಪಿಎ ನೀಡಿರುವ ಕೊಡುಗೆ, ಸಾಧನೆಗಳು ದೇಶದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾಗಲಿದೆ ಎಂದು ಕೇಂದ್ರ ಮಾಜಿ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಹೇಳಿದರು.
ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಪರವಾಗಿ ಮಂಗಳವಾರ ನಗರದ ಪ್ರಮುಖ ಬೀದಿಗಳಲ್ಲಿ ರೋಡ್ ಶೋ ಮೂಲಕ ಮತ ಯಾಚನೆ ನಡೆಸಿದ ಅನಂತರ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ದೇಶದ ಗ್ರಾಮಾಂತರ ಪ್ರದೇಶಗಳ ಸರ್ವತೋಮುಖ ಅಭಿವೃದ್ಧಿಗಾಗಿ, ರೈತರ, ಬಡವರ ಕಲ್ಯಾಣಕ್ಕಾಗಿ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅನುದಾನ, ಉದ್ಯೋಗ ಖಾತರಿ ಯೋಜನೆ, ವಿವಿಧ ರೀತಿಯ ಮಾಸಾಶನ ಸೌಲಭ್ಯ ಕಲ್ಪಿಸಿರುವುದು ಕಾಂಗ್ರೆಸ್ ಸಾಧನೆಗಳಾಗಿವೆ. ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ತರುವುದರೊಂದಿಗೆ ದೇಶದ ಅತ್ಯಂತ ಕಟ್ಟಕಡೆಯ ಮನುಷ್ಯನಿಗೂ ಸ್ವಾತಂತ್ರ್ಯ ಒದಗಿಸಿಕೊಟ್ಟಿರುವ ಕೀರ್ತಿ ಕಾಂಗ್ರೆಸ್ಗೆ ಸಲ್ಲುತ್ತದೆ ಎಂದರು. ಹಾವೇರಿ ಲೋಕಸಭಾ ಅಭ್ಯರ್ಥಿ ಸಲೀಂ ಅಹ್ಮದ್, ಮಾಜಿ ಸಂಸದ ಐ.ಜಿ. ಸನದಿ, ಶಾಸಕ ಕೆ.ಬಿ. ಕೋಳಿವಾಡ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ಪ ಕಂಬಳಿ, ನಗರಸಭೆ ಅಧ್ಯಕ್ಷ ಶಿವಣ್ಣ ಮಣೇಗಾರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಹಳ್ಳಳ್ಳಿ, ಮಹಿಳಾ ಅಧ್ಯಕ್ಷೆ ಇಂದಿರಾ ಗಡ್ಡದಗೂಳಿ ಇದ್ದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿರುವ ನಗರಸಭೆ ಮಾಜಿ ಸದಸ್ಯ ಮಂಜುನಾಥ ಗೌಡ ಶಿವಣ್ಣನವರ, ಕೆಜೆಪಿ ತೊರೆದು ಕಾಂಗ್ರೆಸ್ ಸೇರಿರುವ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಕೆಜೆಪಿ ತಾಲೂಕು ಅಧ್ಯಕ್ಷ ಶೇಖಪ್ಪ ಹೊಸಗೌಡ್ರ ಅವರನ್ನು ಎಸ್.ಎಂ. ಕೃಷ್ಣ ಕಾಂಗ್ರೆಸ್ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.