ಹಾವೇರಿ

ಬಿಎಸ್ವೈ ಗೆಲುವು ನಿಶ್ಚಿತ: ಈಶ್ವರಪ್ಪ ವಿಶ್ವಾಸ

Published On :

ಹಾವೇರಿ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಗೆದ್ದಾಗಿದೆ ಎಂದು ಕೆ.ಎಸ್. ಈಶ್ವರಪ್ಪ ಹೇಳಿದರು.
ಮಂಗಳವಾರ ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಯಡಿಯೂರಪ್ಪ ಅವರಿಗೆ ಪೈಪೋಟಿ ಒಡ್ಡುವ ಅಭ್ಯರ್ಥಿಗಳೇ ಅಲ್ಲ. ಜೆಡಿಎಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಯಡಿಯೂರಪ್ಪಗೆ ಪೈಪೋಟಿ ನೀಡುವ ಅಭ್ಯರ್ಥಿ ಎನ್ನುವುದು ಮಾಧ್ಯಮಗಳ ಸೃಷ್ಟಿ. ಶಿವಮೊಗ್ಗದವರು ಕಲೆ, ಸಂಸ್ಕೃತಿಗೆ ಬೆಲೆ ಕೊಡುವ ಜನ. ಹೀಗಾಗಿ ಕ್ಷೇತ್ರಕ್ಕೆ ಶಿವರಾಜಕುಮಾರ್ ಬಂದಾಗ ಅವರನ್ನು ನೋಡಲು ಜನ ಸೇರುತ್ತಾರೆಯೇ ವಿನಾಃ ಜೆಡಿಎಸ್ ಬೆಂಬಲಕ್ಕೆ ಅಲ್ಲ ಎಂದರು. ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರು ವ್ಯವಸ್ಥಿತವಾಗಿ ಪಕ್ಷವನ್ನು ಸಂಘಟಿಸಿದ್ದರಿಂದ ಬಿಜೆಪಿಗೆ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದ್ದು, ಹಾವೇರಿ ಕ್ಷೇತ್ರದ ಶಿವಕುಮಾರ ಉದಾಸಿ ಹಾಗೂ ಧಾರವಾಡ ಕ್ಷೇತ್ರದ ಪ್ರಹ್ಲಾದ್ ಜೋಶಿ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು. ಸಂಸದ ಪ್ರಹ್ಲಾದ್ ಜೋಶಿ, ಬಿಜೆಪಿ ಜಿಲ್ಲಾಧ್ಯಕ್ಷ ಭೋಜರಾಜ ಕರೂದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ಬಸವರಾಜ ಅರಬಗೊಂಡ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.