ಹಾವೇರಿ

ಕಾಂಗ್ರೆಸ್ ಪರ ಅಲೆ: ಎಚ್.ಎಂ. ರೇವಣ್ಣ

Published On :

ಹಾವೇರಿ:  ಕೇಂದ್ರದ ಯುಪಿಎ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರ ನೀಡಿರುವ ಅನೇಕ ಕಾರ್ಯಕ್ರಮಗಳು ಜನರ ಮನಸ್ಸಿನಲ್ಲಿ ಉಳಿದಿವೆ. ಆದ್ದರಿಂದ ದಿನೆ ದಿನೆ ಕಾಂಗ್ರೆಸ್ ಪರವಾದ ಅಲೆ ಹೆಚ್ಚುತ್ತಿದ್ದು, ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಸಲೀಂ ಅಹ್ಮದ್ ಅವರ ಗೆಲವು ನಿಶ್ಚಿತವಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ಎಚ್.ಎಂ. ರೇವಣ್ಣ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ವೈಫಲ್ಯದಿಂದ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಜನಮನ್ನಣೆ ಸಿಕ್ಕಿದೆ. ನಂತರ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಉತ್ತಮ ಕಾರ್ಯಕ್ರಮಗಳು ಜನಾಕರ್ಷಣೆಗೆ ಕಾರಣವಾಗಿವೆ. ಪ್ರಣಾಳಿಕೆಯಲ್ಲಿ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಲಾಗಿದೆ. ಆದ್ದರಿಂದ ರಾಜ್ಯದಲ್ಲಿ ಪಕ್ಷಕ್ಕೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಹಾವೇರಿ ಸೇರಿದಂತೆ ಕನಿಷ್ಠ 20 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೇಂದ್ರದಲ್ಲಿ ಬೇರೆ ಸರ್ಕಾರ ಬರುತ್ತದೆ ಎಂಬ ವಾತಾವರಣವೂ ಕುಸಿಯುತ್ತಿದೆ. ರಾಷ್ಟ್ರೀಯ ಐಕ್ಯತೆ, ಸಮಗ್ರತೆಗಾಗಿ ಜನತೆ ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ ಎಂದ ಅವರು, ಆರ್‌ಟಿಐನಿಂದ ಹೊಟ್ಟೆ ತುಂಬುವುದಿಲ್ಲ ಎಂಬ ಮೋದಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು. ಭಾಷಣದಿಂದ ಹೊಟ್ಟೆ ತುಂಬುವುದಿಲ್ಲ, ಬದಲಾಗಿ ಉತ್ತಮ ಕಾರ್ಯಕ್ರಮಗಳಿಂದ ಜನರಿಗೆ ಹೊಟ್ಟೆ ತುಂಬುತ್ತದೆ ಎಂದು ಪ್ರತಿಕ್ರಿಯಿಸಿದರು. ಶಾಸಕ ಬಸವರಾಜ ಶಿವಣ್ಣನವರ, ಕುರುಬ ಸಮಾಜದ ರಾಜ್ಯಾಧ್ಯಕ್ಷ ಡಾ. ಸಣ್ಣಕ್ಕಿ, ಪ್ರಮುಖರಾದ ಪಿ. ರಾಜಕುಮಾರ, ಚಂದ್ರಶೇಖರ ಮುದುಕಣ್ಣನವರ, ಪ್ರಭು ಬಿಷ್ಟನಗೌಡ್ರ, ಡಿ.ಬಸವರಾಜ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.