ಹಾವೇರಿ

ಬಡತನ ನಿವಾರಣೆ: ಕಾಂಗ್ರೆಸ್ ವಿಫಲ

Published On :

ಶಿಗ್ಗಾಂವಿ: 60 ವರ್ಷ ದೇಶದ ಆಡಳಿತ ನಡೆಸಿದರೂ ಬಡತನ ನಿವಾರಣೆಯಾಗಿಲ್ಲ. ದಲಿತ, ಅಲ್ಪಸಂಖ್ಯಾತರ ಬಡವರ ಪರ ಎಂದು ಹೇಳುವ ಕಾಂಗ್ರೆಸ್ ಬಡತನ ನಿವಾರಿಸಲು ವಿಫಲವಾಗಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಆರೋಪಿಸಿದರು.
ಪಟ್ಟಣದ ಶಾಸಕ ಬಸವರಾಜ ಬೊಮ್ಮಾಯಿ ಸ್ವ-ಗೃಹದಲ್ಲಿ ರಾತ್ರಿ ನಡೆದ ಶಿಗ್ಗಾಂವಿ-ಸವಣೂರು ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪಂಗಡಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರು ಜಾಗೃತರಾಗಿ ಭ್ರಷ್ಟ ಮುಕ್ತ ರಾಷ್ಟ್ರವನ್ನಾಗಿಸಲು ನರೇಂದ್ರ ಮೋದಿ ಅವರನ್ನು ಬೆಂಬಲಿಸಿ ಎಂದರು.
ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಮಾತನಾಡಿ, ಹಲವಾರು ವರ್ಷಗಳಿಂದ ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ, ಪಂಗಡಗಳ ಮತ ಪಡೆಯುವ ಮೂಲಕ ಅವರಿಗೆ ವಂಚನೆ ಮಾಡಿದೆ. ಜನರಲ್ಲಿ ಈಗ ಅರಿವು ಮೂಡಿದೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಈ ಬಾರಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ಕಾಂಗ್ರೆಸ್ ಪಕ್ಷ, ದಂಡ ನಾಯಕನಿಲ್ಲದ ಸೈನ್ಯದಂತಾಗಿದೆ. ಈ ಚುನಾವಣೆ ಯುದ್ಧದಲ್ಲಿ ಬಿಜೆಪಿ ಗೆಲ್ಲುತ್ತದೆ. ಕಾಂಗ್ರೆಸ್ ಸೋಲು ಕಂಡು ಮನೆ ಸೇರುತ್ತದೆ. ಚುನಾವಣೆ ಬಂದಾಗಲೇ ಹಿಂದುಳಿದ ಜನರ ವೋಟು ಪಡೆದು ಕತ್ತಲೆ ಕೋಣೆಗೆ ತಳ್ಳುವ ಸಂಪ್ರದಾಯಕ್ಕೆ ಕೊನೆ ಹಾಡಿ ಎಂದರು.
ಬಿಜೆಪಿ ಅಧ್ಯಕ್ಷ ದೇವಣ್ಣ ಚಾಕಲಬ್ಬಿ, ಜಿಪಂ ಉಪಾಧ್ಯಕ್ಷೆ ಶೋಭಾ ನಿಸ್ಸೀಮಗೌಡ್ರ, ಜಿಪಂ ಮಾಜಿ ಅಧ್ಯಕ್ಷೆ ಪ್ರೇಮಾ ಪಾಟೀಲ, ಜಿಪಂ ಸದಸ್ಯ ಬಿ.ಟಿ. ಇನಾಮತಿ, ಶಶಿಧರ ಹೊನ್ನಣ್ಣನವರ, ಸಿ.ಎಸ್. ಪಾಟೀಲ, ತಾಪಂ ಉಪಾಧ್ಯಕ್ಷ ನಿಂಗಪ್ಪ ಹರಿಜನ, ಸದಸ್ಯರಾದ ತಿಪ್ಪಣ್ಣ ಸಾತಣ್ಣನವರ, ಗೀತಾ ಹಂಚಿನಮನಿ, ಪುರಸಭೆ ಸದಸ್ಯರು ಉಪಸ್ಥಿತರಿದ್ದರು. ಡಾ. ಬಿ.ಎಚ್. ವೀರಣ್ಣ ಸ್ವಾಗತಿಸಿದರು. ಬಿಜೆಪಿ ಮುಖಂಡರಾದ ಡಾ. ಮಲ್ಲೇಶಪ್ಪ ಹರಿಜನ ನಿರೂಪಿಸಿದರು. ಶಿವಾನಂದ ಮ್ಯಾಗೇರಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.