ಹಾವೇರಿ

ಕ್ಷೇತ್ರದ ಅಭಿವೃದ್ಧಿಗೆ ಕಾಂಗ್ರೆಸ್ ಬೆಂಬಲಿಸಿ

Published On :

ಬ್ಯಾಡಗಿ: ಸಲೀಂ ಅಹ್ಮದ್ ಅವರಿಗೆ ಮತ ನೀಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಒಂದು ಬಾರಿ ಅವಕಾಶ ಕಲ್ಪಿಸುವಂತೆ ಶಾಸಕ ಬಸವರಾಜ ಶಿವಣ್ಣನವರ ಮನವಿ ಮಾಡಿದರು.
ಗುರುವಾರ ತಾಲೂಕಿನ ಕಾಗಿನೆಲೆ, ಅತ್ತಿಕಟ್ಟಿ, ನೆಲ್ಲಿಕೊಪ್ಪ, ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಪರ ಮತ ಯಾಚನೆ ವೇಳೆ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ, ದೀನ ದಲಿತರ, ರೈತ ಹಾಗೂ ಮಹಿಳೆಯರ ಪರವಾದ ಬಜೆಟ್ ಮಂಡಿಸಿದ್ದು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಅದನ್ನೇ ಮಾನದಂಡವಾಗಿಟ್ಟುಕೊಂಡು ಸಲೀಂ ಅಹ್ಮದ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು. ಎಸ್.ಆರ್. ಪಾಟೀಲ ಮಾತನಾಡಿ, ಕಾಂಗ್ರೆಸ್‌ಗೆ 120 ವರ್ಷ ಇತಿಹಾಸವಿದ್ದು, ಅದಕ್ಕೊಂದು ಸಿದ್ಧಾಂತವಿದೆ. ಬಡವರ ದೀನ ದಲಿತರ ಸಂಕಷ್ಟಗಳಿಗೆ ಸ್ಪಂದಿಸುತ್ತಿರುವುದರಿಂದಲೇ ಕಾಂಗ್ರೆಸ್ ಇಂದು ಅಧಿಕಾರಕ್ಕೆ ಬಂದಿದೆ. ಕಾಂಗ್ರೆಸ್‌ಗೆ ಪರ್ಯಾಯ ಶಕ್ತಿ ಇನ್ನೊಂದಿಲ್ಲ, ಕಾಂಗ್ರೆಸ್ ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು. ಕಾಂಗ್ರೆಸ್ ಅಧ್ಯಕ್ಷ ಹುಸೇನಸಾಬ್ ದೊಡಮನಿ, ಕಾಗಿನೆಲೆ ಬ್ಲಾಕ್ ಅಧ್ಯಕ್ಷ ಸುರೇಶಗೌಡ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ಎಸ್.ಸಿ. ಶಿಡೇನೂರ, ಹನುಮಗೌಡ ಪಾಟೀಲ, ರಮೇಶ ಸುತ್ತಕೋಟಿ, ದಾನಪ್ಪ ಚೂರಿ, ಹುಚ್ಚನಗೌಡ್ರ ಲಿಂಗನಗೌಡ್ರ, ಬಸವ ರಾಜ ತಿಳವಳ್ಳಿ, ರುದ್ರಪ್ಪ ಹೊಂಕಣದ, ಮಲ್ಲನಗೌಡ್ರ ಪಾಟೀಲ ಮಾರುತಿ ಅಚ್ಚಿಗೇರಿ, ಶಿವನಗೌಡ್ರ ಪಾಟೀಲ, ರವಿ ಭಜಂತ್ರಿ, ಮುಖಪ್ಪ ತಿಪಲಾಪುರ, ಹಜರತಲಿ ಮೇಗಳಮನಿ, ಶಮಿವುಲ್ಲ ಮಲ್ಲೂರ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.