ಭಾರತ ಗೆಲ್ಲಿಸಿ ವಿಜಯ ರ್ಯಾಲಿಗೆ ಸಿದ್ಧತೆ
ಹಾವೇರಿ: ಪ್ರಸಕ್ತ ಲೋಕಸಭಾ ಚುನಾವಣೆ ಪ್ರಚಾರ ಹಾಗೂ ಭಾರತ ಗೆಲ್ಲಿಸಿ ವಿಜಯ ರ್ಯಾಲಿಗೆ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಏ. 13ರಂದು ಹಾವೇರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಹಾನಗಲ್ ರಸ್ತೆಯ ಪಕ್ಕದ ಜಮೀನಿನಲ್ಲಿ ಪೂರ್ವ ತಯಾರಿ ಭರ್ಜರಿ ನಡೆದಿದೆ.
ಸುಮಾರು 25 ಎಕರೆ ಜಾಗದಲ್ಲಿ ಬೃಹತ್ ಪ್ರಮಾಣದ ಪೆಂಡಾಲ್ ನಿರ್ಮಿಸಲು ಈಗಾಗಲೇ ಸಿದ್ಧತೆ ನಡೆದಿದ್ದು, ಗುರುವಾರ ಬಿಜೆಪಿ ಜಿಲ್ಲಾಧ್ಯಕ್ಷ ಭೋಜರಾಜ ಕರೂದಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ ಪೂರ್ವ ತಯಾರಿ ಕಾರ್ಯದ ಪರೀಶಿಲನೆ ನಡೆಸಿದರು. ಈ ಮೊದಲು ನಗರದ ಮುನ್ಸಿಫಲ್ ಹೈಸ್ಕೂಲ್ ಮೈದಾನದಲ್ಲಿ ಕಾರ್ಯಕ್ರಮ ಮಾಡಲು ನಿಶ್ಚಯಿಸಲಾಗಿತ್ತು. ಆದರೆ ಭದ್ರತೆ ಹಾಗೂ ಇನ್ನಿತರ ಕಾರಣಾಂತರಗಳಿಂದ ಕಾರ್ಯಕ್ರಮವನ್ನು ನಗರ ಪ್ರದೇಶದಿಂದ ಅರ್ಧ ಕಿಮೀ ದೂರವಿರುವ ಹಾನಗಲ್ ರಸ್ತೆಯ ಪಕ್ಕದ ಜಮೀನಿನಲ್ಲಿ ಮಾಡಲು ನಿರ್ಧರಿಸಿದ್ದರಿಂದ ಕಾರ್ಯಕ್ರಮದ ತಯಾರಿ ಭರದಿಂದ ಸಾಗಿದೆ. ಮೋದಿ ಹೆಲಿಕಾಪ್ಟರ್ ಲ್ಯಾಂಡಿಂಗ್‌ಗೆ ವ್ಯವಸ್ಥೆ ಕಲ್ಪಿಸಲಾಗಿದೆ.
ವಾಹನ ನಿಲುಗಡೆಗೆ ವ್ಯವಸ್ಥೆ: ಸಾರ್ವಜನಿಕರು ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ. ಅಕ್ಕ-ಪಕ್ಕದ ಜಮೀನುಗಳಲ್ಲಿ ವಿಐಪಿಗಳ ವಾಹನ ಹಾಗೂ ಜಿಲ್ಲೆಯ ಬೇರೆ ಬೇರೆ ಗ್ರಾಮಗಳಿಂದ ಬರುವ ಸಾರ್ವಜನಿಕರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮ ಪೂರ್ವ ಸಿದ್ಧತೆಯನ್ನು ನಗರಸಭೆ ಸದಸ್ಯ ನಿರಂಜನ ಹೆರೂರ, ಮಲ್ಲಣ್ಣ ಅಂದ್ರಾಳ, ಸತೀಶ ಕೋರಿಶೆಟ್ಟರ ಸೇರಿದಂತೆ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಅಚ್ಚುಕಟ್ಟಾಗಿ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

