ಹಾವೇರಿ

ಅಂಬೇಡ್ಕರ್ ಜಯಂತಿ ಆಚರಣೆ

Published On :

ಹಾವೇರಿ:  ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ 123ನೇ ಜನ್ಮ ದಿನಾಚರಣೆಯನ್ನು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಚರಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾದ ಈ ಕಾರ್ಯಕ್ರಮದಲ್ಲಿ, ಜಿಲ್ಲಾಧಿಕಾರಿ ಎಂ. ಮಂಜುನಾಥ ನಾಯಕ ಅವರು ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಇದಕ್ಕೂ ಮುಂಚೆ ಸುಭಾಸ ವೃತ್ತದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿಗಳು ಮಾಲಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಬಿ. ಆಂಜನಪ್ಪ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ಜಿಪಂ ಉಪ ಕಾರ್ಯದರ್ಶಿ ಜಿ. ಗೋವಿಂದಸ್ವಾಮಿ, ಉಪವಿಭಾಗಾಧಿಕಾರಿ ಶಿವರಾಜ, ತಹಸೀಲ್ದಾರ್ ಪಂಪನಗೌಡ ಮೇಲ್ಸೀಮೆ, ಮುಖ್ಯ ಯೋಜನಾಧಿಕಾರಿ ಬಸನಗೌಡ್ರ, ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ನಾಗರಾಜ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ ಹೊರಪೇಟೆ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.