ಹಾವೇರಿ

ಅಂಬೇಡ್ಕರ್ ಪ್ರತಿಮೆಗೆ ಉದಾಸಿ ಮಾಲಾರ್ಪಣೆ

Published On :

ಹಾವೇರಿ:  ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 123ನೇ ಜಯಂತಿ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಸೋಮವಾರ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಇದಕ್ಕೂ ಮೊದಲು ಅಂಬೇಡ್ಕರ್ ಭಾವಚಿತ್ರಕ್ಕೆ ಕಾಯಿ, ಕರ್ಪೂರ ಬೆಳಗಿ ಪೂಜೆ ಸಲ್ಲಿಸಿದರು. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪರ ಜೈಘೋಷ ಕೂಗಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ಜಿಲ್ಲಾ ವಕ್ತಾರ ಪ್ರಭು ಹಿಟ್ನಳ್ಳಿ, ಯುವ ಮೋರ್ಚಾ ಅಧ್ಯಕ್ಷ ಪ್ರದೀಪ ಮುಳ್ಳೂರ, ಸುರೇಶ ಹೊಸಮನಿ, ಗಿರೀಶ ತುಪ್ಪದ, ಜಗದೀಶ ಮಲಗೋಡ, ವಿಜಯಕುಮಾರ ಚಿನ್ನಿಕಟ್ಟಿ, ಬಾಬುಸಾಬ್ ಮೋಮಿನಗಾರ, ಶ್ರೀಪಾದ ಬೆಟಗೇರಿ ಇತರರು ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.