ಕಾಂಗ್ರೆಸ್ ದುರಾಡಳಿತಕ್ಕೆ ಪ್ರಾಯಶ್ಚಿತ್ತ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಏ. 14
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಲಿದ್ದಾರೆ. ದೇಶದಲ್ಲಿ 10 ವರ್ಷ ದುರಾಡಳಿತ ನಡೆಸಿದ್ದಕ್ಕೆ ಕಾಂಗ್ರೆಸ್ ಪ್ರಾಯಶ್ಚಿತ್ತ ಅನುಭವಿಸಲಿದೆ ಎಂದು ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಹೇಳಿದರು.
ತಾಲೂಕಿನ ಗುಂಡೇನಹಳ್ಳಿ ಗ್ರಾಮದಲ್ಲಿ ಸೋಮವಾರ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಮಾತನಾಡಿದರು. ಪ್ರಧಾನಿ ಮನಮೋಹನ್ಸಿಂಗ್ ಸ್ವತಃ ಒಬ್ಬ ಅರ್ಥಶಾಸ್ತ್ರಜ್ಞರಾಗಿಯೂ ಬೆಲೆ ಏರಿಕೆ ನಿಯಂತ್ರಿಸಲಾಗದೇ ಬಡವರ ನೆಮ್ಮದಿ ಹಾಳು ಮಾಡಿದ್ದಾರೆ ಎಂದರು.
ಬೀಜ, ಗೊಬ್ಬರ, ಡೀಸೆಲ್, ಪೆಟ್ರೋಲ್ ಏರಿಕೆ ಮಾಡಿದ ಯುಪಿಎಯಿಂದ ಜನತೆ ನಿದ್ದೆಗೆಡುವಂತೆ ಆಗಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೆಲ ಕಚ್ಚಲಿದೆ. ರೈತ ವಿಠಲ ಅರಭಾವಿ ಸಾವಿಗೆ ಪರೋಕ್ಷವಾಗಿ ಕಾಂಗ್ರೆಸೇ ಕಾರಣ. ಅಧೀವೇಶನದ ವೇಳೆ ರೈತರ ಜತೆ ಚರ್ಚೆ ನಡೆಸಿದ್ದರೆ ಅರಭಾವಿ ಸಾಯುವ ಪ್ರಶ್ನೆ ಉದ್ಭವವಾಗುತ್ತಿರಲಿಲ್ಲ. ಸಚಿವ ಸಂಪುಟದಲ್ಲಿ ತೀರ್ಮಾನಿಸಿದ ಕಬ್ಬಿನ ದರ ಇಂದಿಗೂ ರೈತನಿಗೆ ತಲುಪಿಲ್ಲ ಎಂದು ಆರೋಪಿಸಿದರು.
ಗುಜರಾತ್ ಅಭಿವೃದ್ಧಿ ಕುರಿತು ಯಾವುದೇ ಅಧ್ಯಯನ ನಡೆಸದೆ ಮೋದಿ ವಿರುದ್ಧ ವಾಗ್ದಾಳಿ ಮಾಡುವುದು ಸರಿಯಲ್ಲ. ಎಲ್ಲ ಮಾಧ್ಯಮಗಳಿಂದ ಹಿಡಿದು ಬಿಜೆಪಿ ಹಾಗೂ ಮೋದಿ ಪರ ಜನಾಭಿಪ್ರಾಯ ಸಂಗ್ರಹವಾಗುತ್ತಿದ್ದು, ಕನಿಷ್ಠ 20 ಸ್ಥಾನಗಳಲ್ಲಿ ಗೆಲವು ಸಾಧಿಸಲಿದ್ದೇವೆ. ಬದ್ಧತೆ ಇಲ್ಲದ ಕಾಂಗ್ರೆಸ್ ಕೇವಲ ಅಧಿಕಾರದ ಆಸೆಗಾಗಿ ಜನಪ್ರಿಯ ಯೋಜನೆಗಳನ್ನು ಘೋಷಿಸುತ್ತಿದೆ. ನರೇಂದ್ರ ಮೋದಿ ಅವರನ್ನು ಒಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡಿದಲ್ಲಿ ಯುವಕರಿಗೆ ಉದ್ಯೋಗ ಸೃಷ್ಟಿಸುವ ಜತೆಗೆ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.
ಮಾಜಿ ಶಾಸಕ ಸುರೇಶಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನ, ವಿರೂಪಾಕ್ಷಪ್ಪ ಬಳ್ಳಾರಿ, ರವೀಂದ್ರ ಪಟ್ಟಣಶೆಟ್ಟಿ, ಸುರೇಶ ಯತ್ನಳ್ಳಿ, ಬಸವರಾಜ ಛತ್ರದ, ಸುಧಾ ಕಳ್ಳಿಹಾಳ, ಮುರಿಗೆಪ್ಪ ಶೆಟ್ಟರ, ರಾಮಣ್ಣ ಕೋಡಿಹಳ್ಳಿ, ಚಂದ್ರಣ್ಣ ಮುಚ್ಚಟ್ಟಿ, ನಾರಾಯಣಪ್ಪ ಕರ್ನೂಲ, ಮಲ್ಲೇಶ ಬಣಕಾರ, ಬಸವರಾಜ ಹಂಜಿ, ಪ್ರಶಾಂತ ಯಾದವಾಡ, ರಾಮಣ್ಣ ಉಕ್ಕುಂದ, ಬಾಬು ಬಡಿಗೇರ, ರೋಹಿಣಿ ಹುಣಸೀಮರದ, ಮುನಾಫ್ ಎರೇಶಿಮಿ, ರಾಜೇಸಾಬ್ ಕನವಳ್ಳಿ, ಅಜೀಜ್ ಬಿಜಾಪುರಿ, ಮಹಮದ್ ಅಲಿ ಜಿನ್ನಾ, ಹಲಗೇರಿ ಮಹಿಳಾ ಮೋರ್ಚಾ ಅಧ್ಯಕ್ಷೆ ಗಿರಿಜಾ ಪಟ್ಟಣಶೆಟ್ಟಿ, ವೀರಭದ್ರಗೌಡ ಹೊಮ್ಮರಡಿ, ಸುರೇಶ ಕಳ್ಳಿಹಾಳ, ರೋಶನ್ ರಾಯ್ಕರ್, ಸುರೇಶ ಹೊಸಮನಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

