ರಾಣಿಬೆನ್ನೂರು: ತಾಲೂಕು ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿರುವ 35 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಪಂ, ಗಾಪಂಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ಮಂಗಳವಾರ ನಗರದ ಪ್ರಮುಖ ಬೀದಿಗಳಲ್ಲಿ ಮತದಾರರ ಜಾಗೃತಿಗಾಗಿ ಜಾಥಾ ನಡೆಸಿದರು.
ಜಾಥಾಕ್ಕೆ ಚಾಲನೆ ನೀಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಕೃಷ್ಣಮೂರ್ತಿ ಮಾತನಾಡಿ, ಮತದಾನ ದೇಶದ ಪ್ರತಿಯೊಬ್ಬನ ಹಕ್ಕಾಗಿದ್ದು, ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಮತದಾನ ಮಾಡಲು ಮುಂದಾಗಬೇಕು. ತಾಲೂಕಿನ 35 ಗ್ರಾಪಂ ವ್ಯಾಪ್ತಿಗೊಳಪಟ್ಟಿರುವ ಎಲ್ಲ ಗ್ರಾಮಗಳಲ್ಲಿ ಪಂಚಾಯಿತಿ ನೌಕರರು, ಶಾಲಾ ಮಕ್ಕಳು, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಯ ನೌಕರರು ಗ್ರಾಮಾಂತರ ಪ್ರದೇಶದ ಮತದಾರರ ಜಾಗೃತಿಗಾಗಿ ಜಾಥಾ ನಡೆಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ಆದೇಶದ ಮೇರೆಗೆ ನಗರದಲ್ಲಿ ಜಾಗೃತಿ ಜಾಥಾ ನಡೆಸುತ್ತಿರುವುದಾಗಿ ತಿಳಿಸಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಆರ್.ಡಿ. ಹೊಂಬರಡಿ, ವ್ಯವಸ್ಥಾಪಕ ಬಸವರಾಜ ಶಿಡೇನೂರು, ಪಂಚಾಯಿತಿ ನೌಕರರ ಸಂಘದ ಅಧ್ಯಕ್ಷ ಬಸನಗೌಡ ಪಾಟೀಲ, ತಾಪಂ ಲೆಕ್ಕ ಅಧೀಕ್ಷಕ ಶ್ರೀಕಾಂತ ಸಾಗರ, ದಿಂಗಾಲೇಶ ಅಂಗೂರು, ಎನ್.ಜಿ. ವಡೇರಹಳ್ಳಿ, ಕೆ.ಕೆ. ಶಿರೋಳಕರ, ಎಚ್.ಸಿ. ಹಾಲಸ್ವಾಮಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಪುತ್ರಪ್ಪ ಹಲವಾಗಲ, ಟಿ.ಬಿ. ಮೂಗಾನವರ, ರಂಗಪ್ಪ ಕೊರಕಲಿ, ಎಸ್. ಭಾನುಮತಿ, ಹಾವನೂರು, ಮದ್ಲೆರ, ಚವ್ಹಾಣ, ಡಿ.ಬಿ. ಹರಿಜನ, ಸಾವಿತ್ರಾ ಅಮ್ಮನವರ ಇದ್ದರು.