ನೀರು ಪೂರೈಸದಿದ್ದರೆ ನಗರಸಭೆಗೆ ಮುತ್ತಿಗೆ: ಎಚ್ಚರಿಕೆ
ಹಾವೇರಿ: ನಗರದ ಜನತೆಗೆ ಸಮರ್ಪಕವಾಗಿ ನೀರು ಪೂರೈಸುವಲ್ಲಿ ನಗರಸಭೆ ವಿಫಲವಾಗಿದೆ. ತಕ್ಷಣ ಕ್ರಮ ಕೈಗೊಂಡು ನೀರು ಪೂರೈಸದಿದ್ದರೆ ಏ. 29ರಂದು ಬಿಜೆಪಿ ವತಿಯಿಂದ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಶಹರ ಘಟಕದ ಅಧ್ಯಕ್ಷ ಗುಡ್ಡನಗೌಡ ಅಂದಾನಿಗೌಡ್ರ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ನಗರಕ್ಕೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಇದರಿಂದ ನೀರಿನ ಹಾಹಾಕಾರ ಎದ್ದಿದ್ದು, ಇದನ್ನು ನಗರಸಭೆ ಗಂಭೀರವಾಗಿ ಪರಿಗಣಿಸಬೇಕು. ಕನಿಷ್ಠ 4 ದಿನಕ್ಕಾದರೂ ಒಮ್ಮೆ ನೀರು ಪೂರೈಕೆ ಮಾಡಬೇಕು. ಎಲ್ಲ ಬೋರ್ವೆಲ್ಗಳನ್ನು ದುರಸ್ತಿ ಮಾಡಬೇಕು. ಬೋರ್ವೆಲ್ ಇಲ್ಲದಿದ್ದರೆ ಟ್ಯಾಂಕ್ರ್ಗಳಿಂದ ನೀರು ಸರಬರಾಜು ಮಾಡಬೇಕು. ನೀರು ಪೂರೈಕೆ ಪೈಪ್ಲೈನ್ ಒಡೆಯದಂತೆ ರಕ್ಷಣೆ ಮಾಡಬೇಕು ಹಾಗೂ ಸುರಕ್ಷತೆಗೆ ಸೆಕ್ಯುರಿಟಿ ಗಾರ್ಡ್ ನೇಮಿಸಬೇಕು. ತುಂಗಭದ್ರಾ ನದಿಗೆ ಮರಳು ಚೀಲಗಳನ್ನು ಹಾಕಲಾಗಿದ್ದು, ಅದನ್ನು ಒಡೆಯದಂತೆ ಎಚ್ಚರಿಕೆ ವಹಿಸಬೇಕು. ಕಂಚಾರಗಟ್ಟಿಯಲ್ಲಿ ಹೆಚ್ಚುವರಿಯಾಗಿ ಮೋಟಾರ್ ಹಾಗೂ ಪಂಪ್ಗಳನ್ನು ಇಡಬೇಕು. ಕಂಚಾರಗಟ್ಟಿ ಪಂಪ್ ಹೌಸ್ ಮತ್ತು ಫಿಲ್ಟರ್ ಬೆಡ್ಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು, ಈ ಎಲ್ಲ ಕ್ರಮ ಕೈಗೊಂಡು ನಗರಕ್ಕೆ ಸಮರ್ಪಕವಾಗಿ ಹಾಗೂ ನಿಗದಿತ ಸಮಯದಲ್ಲಿ ಕುಡಿಯುವ ನೀರು ಪೂರೈಸದಿದ್ದರೆ ಬಿಜೆಪಿಯಿಂದ ಏ. 29ರಂದು ನಗರಸಭೆ ಕಚೇರಿ ಮುತ್ತಿಗೆ ಹಾಕಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

