ಆಂಜನೇಯ ಸ್ವಾಮಿ ರಥೋತ್ಸವ ಇಂದು
ಹಾವೇರಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ತೇರುಬೀದಿ ಆಂಜನೇಯ ಸ್ವಾಮಿ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏ. 26ರಂದು ಜರುಗುತ್ತವೆ. ದೇವಸ್ಥಾನದಲ್ಲಿ ಅಂದು ಬೆಳಗ್ಗೆ ಶೇಷಾಚಾರ್ಯ ಅಗ್ನಿಹೋತ್ರಿ ಪವನ ಹೋಮ ನಡೆಯಲಿದೆ.
ಬೆಳಗ್ಗೆ 10.30ಕ್ಕೆ ಹುಕ್ಕೇರಿಮಠದ ಸದಾಶಿವಶ್ರೀಗಳು ಜ್ಯೋತಿ ಬೆಳಗಿಸುವ ಮೂಲಕ ಆಂಜನೇಯ ಸ್ವಾಮಿ ಉತ್ಸವಕ್ಕೆ ಚಾಲನೆ ನೀಡುವರು. ದೇವಸ್ಥಾನದಿಂದ ಹೊರಡುವ ಉತ್ಸವವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮರಳಿ ದೇವಸ್ಥಾನಕ್ಕೆ ಆಗಮಿಸುವುದು.
ಅಂದು ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ ಜರುಗುವುದು. ಮೂರ್ತಿದಾನಿ ಮಲ್ಲೇಶಪ್ಪ ಬಣಕಾರ ಕಾರ್ಯಕ್ರಮ ಉದ್ಘಾಟಿಸುವರು. ಮೆರವಣಿಗೆ ಎಸ್.ಆರ್. ಹೆಗಡೆ ಚಾಲನೆ ನೀಡಲಿದ್ದು, ಪ್ರಕಾಶ ಶೆಟ್ಟಿ, ಎಸ್.ಎಸ್. ಕೂಡ್ಲಪ್ಪನವರ, ಗೋವಿಂದ ಪೂಲಚೆಂದಜಿ ಖಂಡೇಲವಾಲ್, ಅಜ್ಜಪ್ಪ ಗಾಣಿಗೇರ, ಚನ್ನಪ್ಪ ಶೆಂಕರಶೆಟ್ಟಿ ಮತ್ತಿತರರು ಸಹಾಯ ಹಸ್ತ ನೀಡಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಳ್ಳುವಂತೆ ಹಾವೇರಿ ಜಿಲ್ಲಾ ಹನುಮ ಜಯಂತಿ ಸೇವಾ ಸಮಿತಿ ಕೋರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

