ಹಾವೇರಿ

ಸಾಮೂಹಿಕ ವಿವಾಹ ಉತ್ತಮ

Published On :

ಗುತ್ತಲ:  ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಬಹುದಾಗಿದೆ ಎಂದು ಹೂವಿನ ಶಿಗ್ಲಿಯ ವಿರಕ್ತಮಠದ ಚನ್ನವೀರಸ್ವಾಮೀಜಿ ಹೇಳಿದರು. ಅವರು ಹೊಸರಿತ್ತಿ ಸಮೀಪದ ಅಕ್ಕೂರ ಗ್ರಾಮದ ಪಂಚದೇವಸ್ಥಾನ ಆವರಣದಲ್ಲಿ ಗುರುವಾರ ನಡೆದ ಶರಣ ಬಸವೇಶ್ವರ ಪುರಾಣ ಮಹಾಮಂಗಲೋತ್ಸವ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು.
ಸಾಮಾಜಿಕ ಜೀವನದಲ್ಲಿ ಮದುವೆ ಮಹತ್ವವವನ್ನು ಪಡೆದುಕೊಂಡಿದೆ. ಅಲ್ಲದೇ, ಮದುವೆಯಾದ ಮೇಲೆ ಸುಖ, ದಾಂಪತ್ಯ ಸಾಗಿಸುವುದರ ಜತೆಗೆ ಕುಟುಂಬದ ನಿರ್ವಹಣೆಯಲ್ಲಿ ಸತಪತಿಗಳು ಒಂದಾಗಿ ಬಾಳಬೇಕೆಂದರು.
ಸಾನ್ನಿಧ್ಯವಹಿಸಿದ್ದ ಸಿದ್ಧರಾಮೇಶ್ವರ ಶ್ರೀಗಳು ಮಾತನಾಡಿ, ಮಾನವ ಜೀವಿಗೊಂದು ಮದುವೆ ಹೊಸ ಜೀವನ ನೀಡುತ್ತದೆ. ಮದುವೆಯ ಬಂಧನದಲ್ಲಿ ಸಿಲುಕಿದ ಸತಪತಿ ಹೊಂದಾಣಿಕೆ ಜೀವನ ನಡೆಸುವುದರ ಮುಖಾಂತರ ಸಮಾಜದಲ್ಲಿ ಉತ್ತಮ ಬದುಕು ಸಾಗಿಸಬೇಕೆಂದು ಕರೆ ನೀಡಿದರು. ಶಾಂತವೀರಯ್ಯ ಶಾಸ್ತ್ರಿಗಳು ಬಂಗಾರಿಮಠ, ಹೊಳೆಯಪ್ಪ ಗವಾಯಿಗಳು, ವಿಜಯಕುಮಾರ ಮರೋಳ, ಹಾಗೂ ಅಕ್ಕೂರ ಗ್ರಾಮದ ನಾಗರಿಕರು ಭಾಗವಹಿಸಿದ್ದರು. ಸಾಮೂಹಿಕ ವಿವಾಹದಲ್ಲಿ 16 ಜೋಡಿಗಳು ನೂತನ ದಾಂಪತ್ಯ ಜೀವನಕ್ಕೆ ಕಾಲಿರಿಸಿದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.