ಮೂಲಸೌಲಭ್ಯದಿಂದ ಹಿಂದುಳಿದ ವರ್ಗ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಫೆ. 2
ಎಸ್ಸಿ ಜನತೆಗೆ ಮೂಲ ಸೌಲಭ್ಯ ಒದಗಿಸಿ ಅವರನ್ನು ಮುಖ್ಯ ವಾಹಿನಿಗೆ ತರುವ ಪ್ರಯತ್ನ ನಡೆಯಬೇಕಿದೆ. ಶಿಕ್ಷಣ, ಉದ್ಯೋಗ, ಹಕ್ಕುಗಳ ಬಗ್ಗೆ ಸರ್ಕಾರ ಚಿಂತಿಸಿ ಕಾರ್ಯಕ್ರಮಗಳನ್ನು ರೂಪಿಸಿದಾಗ ಹಿಂದುಳಿದ ಸಮಾಜಗಳ ಏಳಿಗೆ ಸಾಧ್ಯ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ಪಟ್ಟಣದ ಸರ್ಕಾರಿ ಪರಿಶಿಷ್ಟ ಜಾತಿಯ ವಸತಿ ಪಾಠ ಶಾಲೆಯ ಸುವರ್ಣ ಸಂಭ್ರಮ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಬದುಕಿನಲ್ಲಿ ಎದುರಾಗುವ ಕಷ್ಟಗಳನ್ನು ಅಪ್ಪಿಕೊಂಡು ನಡೆದಾಗ ಮಾತ್ರ ಬದುಕು ನಮ್ಮನ್ನು ಅಪ್ಪಿಕೊಳ್ಳುತ್ತದೆ ಎಂದರು.
ಹಿಂದುಳಿದ ವರ್ಗದ ಜನರ ಮೇಲೆ ಕನಿಕರ ಬೇಕಿಲ್ಲ. ಸೂಕ್ತ ಅವಕಾಶವನ್ನು ಬದುಕಿನಲ್ಲಿ ಎದುರಾಗುವ ಕಷ್ಟಗಳನ್ನು ಮೆಟ್ಟಿ ನಿಂತು, ಅಸಾಧ್ಯ ಎಂಬ ಮನಸ್ಸಿನ ದೌರ್ಬಲ್ಯದಿಂದ ಹೊರ ಬಂದಾಗ ಮಾತ್ರ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಆರು ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಅವುಗಳಲ್ಲಿ ಎರಡು ವಸತಿ ಶಾಲೆಯ ಕಟ್ಟಡ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು, ಇನ್ನೆರಡು ತಿಂಗಳಲ್ಲಿ ಲೋಕಾರ್ಪಣೆಗೊಳ್ಳಲಿವೆ ಎಂದರು.
ವಸತಿ ಪಾಠಶಾಲೆಯ ಹಳೆ ವಿದ್ಯಾರ್ಥಿ, ಕಾರವಾರ ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕ ಚಂದ್ರಶೇಖರ ಲಮಾಣಿ ಮಾತನಾಡಿ, ಶ್ರದ್ಧೆಯಿದ್ದಾಗ ಮಾತ್ರ ವಿದ್ಯೆ ಗೆಲ್ಲಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಮೆಟ್ಟಿಲನ್ನಾಗಿಸಿಕೊಂಡಾಗ ಮಾತ್ರ ಮುಂದೆ ಉಜ್ವಲ ಭವಿಷ್ಯ ದೊರೆಯಲಿದೆ ಎಂದರು.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲೇಶಪ್ಪ ಹೊರಪೇಟಿ, ತಾಪಂ ಅಧ್ಯಕ್ಷೆ ಸುಜಾತಾ ಕಲಕಟ್ಟಿ, ಉಪಾಧ್ಯಕ್ಷ ನಿಂಗಪ್ಪ ಹರಿಜನ, ಜಿಪಂ ಸದಸ್ಯರಾದ ಬಿ.ಟಿ. ಇನಾಮತಿ, ಸಿ.ಎಸ್. ಪಾಟೀಲ, ಶಶಿಧರ ಹೊನ್ನಣ್ಣವರ, ಸರೋಜವ್ವ ಆಡಿನ, ಎಪಿಎಂಸಿ ಅಧ್ಯಕ್ಷ ವೀರನಗೌಡ ಪಾಟೀಲ, ಸದಸ್ಯ ಬರಮಗೌಡ ಪಾಟೀಲ, ತಾಪಂ ಸದಸ್ಯರಾದ ತಿಪ್ಪಣ್ಣ ಸಾತಣ್ಣವರ, ವೀರನಗೌಡ ಪಾಟೀಲ, ನಿಂಗಣ್ಣ ಜವಳಿ, ಫರೀದಾಬಾನು ಶೇಖಸನದಿ, ಶಾಂತಮ್ಮ ಬೊಮ್ಮನಹಳ್ಳಿ, ಪುರಸಭಾ ಸದಸ್ಯರಾದ ಶಂಕ್ರಮ್ಮ ಅಂದಲಗಿ, ಬಿಜೆಪಿ ಅಧ್ಯಕ್ಷ ದೇವಣ್ಣ ಚಾಕಲಬ್ಬಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಗಂಗಣ್ಣ ಸಾತಣ್ಣವರ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪಿ.ಎ. ಭಜಂತ್ರಿ ಉಪಸ್ಥಿತರಿದ್ದರು.
1965ರಲ್ಲಿ ಸ್ಥಾಪನೆಗೊಂಡು ಐವತ್ತು ವರ್ಷ ಪೂರೈಸಿರುವ ವಸತಿ ಪಾಠಶಾಲೆಯ ಇತಿಹಾಸವನ್ನೊಳಗೊಂಡ ಸುವರ್ಣ ಸಂಭ್ರಮ ಪುಸ್ತಕವನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು. ಶ್ರೀದೇವಿ ಪೂಜಾರ ಪ್ರಾರ್ಥಿಸಿದರು. ಮುಖ್ಯ ಶಿಕ್ಷಕ ಚಿದಂಬರ ಚೊಂಚಳ್ಳಿ ನಿರ್ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

