ವಸತಿ ಶಾಲೆಗಳಿಗೆ ಅರ್ಜಿ ಆಹ್ವಾನ
ಹಾವೇರಿ: ಜಿಲ್ಲೆಯ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ಮಾದರಿ ವಸತಿ ಶಾಲೆಗಳಲ್ಲಿ 6 ರಿಂದ 12ನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ಗ್ರಾಮೀಣ ವಿದ್ಯಾರ್ಥಿಗಳಿಗೆ ಅವಕಾಶವಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡುವುದರ ಜತೆಗೆ ಉತ್ತಮ ವಿದ್ಯಾಭ್ಯಾಸ ನೀಡಲಾಗುತ್ತದೆ. ಈ ಶಾಲೆಗಳಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯಮಿತಿ ರು. 2 ಲಕ್ಷ, ಹಿಂದುಳಿದ ವರ್ಗದ ಪ್ರವರ್ಗ 1ಕ್ಕೆ ರು. 1 ಲಕ್ಷ ಹಾಗೂ ಪ್ರವರ್ಗ 2ಎ, 2ಬಿ, 3ಎ ಹಾಗೂ 3ಬಿ ವರ್ಗದವರಿಗೆ ರು. 44500 ಆದಾಯಮಿತಿ ಇರುತ್ತದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ. 50 ಸೀಟುಗಳು ವಿದ್ಯಾರ್ಥಿನಿಯರಿಗೆ ಮತ್ತು ಕಿತ್ತೂರ ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ನೂರಕ್ಕೆ ನೂರರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಮೀಸಲಾಗಿವೆ. ಒಮ್ಮೆ ಈ ವಸತಿ ಶಾಲೆಗಳಿಗೆ 6ನೇ ತರಗತಿಗೆ ವಿದ್ಯಾರ್ಥಿಗಳು ಸೇರಿದಲ್ಲಿ 12ನೇ ತರಗತಿಯವರಿಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದಾಗಿದೆ.
2014-15ನೇ ಸಾಲಿನಲ್ಲಿ 6ನೇ ತರಗತಿ 50 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಳ್ಳಲಾಗುವುದು. ಪ್ರಸ್ತುತ ಕರ್ನಾಟಕದ ಯಾವುದೇ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಮಾಡಿರುವ ಅರ್ಹ ವಿದ್ಯಾರ್ಥಿಗಳು ಜಿಲ್ಲೆಯಲ್ಲಿರುವ 12 (11 ಆಂಗ್ಲ ಮಾಧ್ಯಮ ಹಾಗೂ ಒಂದು ಕನ್ನಡ ಮಾಧ್ಯಮ) ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ 6 ಕಿತ್ತೂರ ರಾಣಿಚೆನ್ನಮ್ಮ ಬಾಲಕಿಯರ ವಸತಿ (ಆಂಗ್ಲ ಮಾಧ್ಯಮ) ಶಾಲೆಗಳ ಪ್ರವೇಶ ಪರೀಕ್ಷೆಗಾಗಿ ಇದೇ ಫೆ. 24 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರವೇಶ ಪರೀಕ್ಷೆಯು ಜಿಲ್ಲೆಯ ಆಯಾ ತಾಲೂಕಾ ಕೇಂದ್ರಗಳಲ್ಲಿ ಮಾ. 23ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1.30ವರೆಗೆ ಜರುಗಲಿದ್ದು, ಏ. 7 ರಂದು ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು. ಏ. 21ರಿಂದ ಮೇ 14ರವರೆಗೆ ಜಿಲ್ಲಾ ಮಟ್ಟದ ಕೌನ್ಸೆಲಿಂಗ್ ಜರುಗಲಿದೆ.
ಅರ್ಜಿ ನಮೂನೆಗಳನ್ನು ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿಸಿಎಂ ವಿಸ್ತರಣಾಧಿಕಾರಿಗಳ ಕಚೇರಿ, ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ಪಡೆಯಬಹುದೆಂದು ಜಿಲ್ಲಾ ಮಟ್ಟದ ಪ್ರವೇಶ ಪರೀಕ್ಷಾ ಸಮಿತಿ ಅಧ್ಯಕ್ಷ, ಜಿಲ್ಲಾಧಿಕಾರಿ ಪಾಂಡುರಂಗ ನಾಯಕ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

