ಶರಣ ಸಂಸ್ಕೃತಿ ಉತ್ಸವ-2014
ಹಾವೇರಿ: ಬಸವ ಚೇತನ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಲಿಂ. ನೈಘಂಟಿನ ಸಿದ್ದಬಸವ ಮುರುಘರಾಜೇಂದ್ರ ಸ್ವಾಮೀಜಿ ಹಾಗೂ ಮಹಾತಪಸ್ವಿ ಅಥಣಿ ಮುರುಘೇಂದ್ರ ಶಿವಯೋಗಿಗಳ ಸ್ಮರಣೋತ್ಸವದ ಅಂಗವಾಗಿ ನಗರದ ಬಸವಕೇಂದ್ರ ಹೊಸಮಠದಲ್ಲಿ ಶರಣ ಸಂಸ್ಕೃತಿ ಉತ್ಸವ-2014 ಫೆ. 19ರಿಂದ 22ರವರೆಗೆ ನಡೆಯಲಿದೆ. ಚಿತ್ರದುರ್ಗದ ಬೃಹನ್ಮಠದ ಶೂನ್ಯಪೀಠಾಧ್ಯಕ್ಷ ಡಾ. ಶಿವಮೂರ್ತಿ ಮುರುಘಾಶರಣರ ಅಧ್ಯಕ್ಷತೆಯಲ್ಲಿ, ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಫೆ. 19ರ ಸಂಜೆ 6 ಗಂಟೆಗೆ ಮೌಢ್ಯ ಬಿಡಿ, ನಂಬಿಕೆ ಇಡಿ ಜಮುರಾ ಸುತ್ತಾಟದಿಂದ ನಾಟಕೋತ್ಸವ, ಫೆ. 20ರಂದು ಸಂಜೆ 6.30ಕ್ಕೆ ಜಮುರಾ ಸುತ್ತಾಟದವರಿಂದ ತಲ್ಲಣಿಸದಿರು ಕಂಡ್ಯಾ ತಾಳು ಮನವೆ ಕಾರ್ಯಕ್ರಮ ನಡೆಯಲಿದೆ.
ಫೆ. 21ರಂದು ಬೆಳಗ್ಗೆ 10.30 ಗಂಟೆಗೆ ಬಸವ ತತ್ವ ಧ್ವಜಾರೋಹಣ, 11 ಗಂಟೆಗೆ ವ್ಯಕ್ತಿತ್ವ ವಿಕಸನ ಶಿಬಿರ, ಸಂಜೆ 5.30ಕ್ಕೆ ಜಾನಪದ ಜಾದು ಕಲಾ ಪ್ರದರ್ಶನ, 6.30 ಕ್ಕೆ ಜಾನಪದ ಸಮಾವೇಶ, ಫೆ. 22ರಂದು ಬೆಳಗ್ಗೆ 10.30ಕ್ಕೆ ಜಾನುವಾರು ಮೇಳ, ಫಲಪುಷ್ಪ ಹಾಗೂ ಕೃಷಿ ವಸ್ತು ಪ್ರದರ್ಶನ, ಸಂಜೆ 6.30ಕ್ಕೆ ಬಸವತತ್ವ ಸಮಾವೇಶ ಮತ್ತು ಡಾ. ಶಿಮೂಶ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಫೆ. 21 ಮತ್ತು 22ರಂದು ಸಂಜೆ 6 ಗಂಟೆಗೆ ಸ್ಮರಣೋತ್ಸವ ಹಾಗೂ ಪ್ರತಿದಿನ ಸಂಜೆ ಜಾನಪದ ಜಾತ್ರೆ, ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅನಾಮಧೇಯ ಶವ ಪತ್ತೆ
ಹಾವೇರಿ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಬಸ್ ನಿಲ್ದಾಣದಲ್ಲಿ ಇತ್ತೀಚಿಗೆ ಅನಾಮದೇಯ ಶವ ಪತ್ತೆಯಾಗಿದೆ. ಸುಮಾರು 65-70 ವಯೋವಾನದ ವ್ಯಕ್ತಿಯೋರ್ವ ಯಾವುದೋ ಕಾಯಿಲೆಯಿಂದ ಬಳಲಿ ಮೃತಪಟ್ಟಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

