ಆಹಾರ ಭದ್ರತೆ ನೆಪದಲ್ಲಿ ಆರೋಗ್ಯ ಹಾಳು
ಬ್ಯಾಡಗಿ: ಆಹಾರ ಭದ್ರತೆ ನೆಪದಲ್ಲಿ ಆರೋಗ್ಯ ಹಾಗೂ ಆರ್ಥಿಕ ಭದ್ರತೆಯನ್ನು ದೇಶ ಕಳೆದುಕೊಳ್ಳುತ್ತಿದೆ ಎಂದು ಪೂರ್ಣಪ್ರಜ್ಞಾ ಬೇಳೂರು ಅಭಿಪ್ರಾಯ ವ್ಯಕ್ತಪಡಿಸಿದರು.
ಸೋಮವಾರ ಸ್ಥಳೀಯ ತಾಲೂಕು ಕ್ರೀಡಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಆಯೋಜಿಸಿದ್ದ ಕೃಷಿಮೇಳದಲ್ಲಿ ಸಾವಯವ ಕೃಷಿ ಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಕೃಷಿಯಲ್ಲಿ ಹೈಬ್ರೀಡ್ ಬೀಜ ಹಾಗೂ ಅಧಿಕ ಪ್ರಮಾಣದ ರಸಗೊಬ್ಬರ ಬಳಸಿ ಹೆಚ್ಚಿನ ಲಾಭ ಪಡೆಯಬೇಕೆಂಬ ಮನಸ್ಥಿತಿಗೆ ರೈತ ಬಂದಿದ್ದಾನೆ. ರಸಗೊಬ್ಬರ ಪಡೆಯಲು ಮುಗಿಬಿದ್ದು ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿರುವ ರೈತ ಸಮುದಾಯಕ್ಕೆ ಏನೆನ್ನಬೇಕು, ಹಣದಿಂದಲೇ ಎಲ್ಲವೂ ಎಂಬ ಮಾತು ಸುಳ್ಳು, ಅದನ್ನು ಗಳಿಸುವುದರಿಂದ ಆರೋಗ್ಯ ಹಾಗೂ ನೆಮ್ಮದಿ ಕಳೆದುಕೊಳ್ಳಬೇಕಾಗುತ್ತದೆ ಎಂದರು. ಸರ್ಕಾರದ ಯಾವುದೇ ಸೌಲಭ್ಯ ಪಡೆಯದೇ ಇರುವ ಅಲ್ಪ ಜಮೀನಿನಲ್ಲೇ ಸಾವಯವ ಕೃಷಿ ಪದ್ಧತಿಗೆ ಸ್ವಾವಲಂಬಿ ಬದುಕು ಸಾಗಿಸುವುದನ್ನು ಪ್ರತಿಯೊಬ್ಬರೂ ಕಲಿಯಬೇಕಾಗುತ್ತದೆ. ದೇಶೀಯ ಬೀಜ ಹಾಗೂ ಸಾವಯವ ಗೊಬ್ಬರ ಬಳಸಿ ಕೃಷಿಭೂಮಿಯೇ ದೇವರು ಎಂಬ ಸಾತ್ವಿಕ ಮನೋಭಾವನೆಯೊಂದಿಗೆ ನಿತ್ಯ ಕೃಷಿಕಾಯಕ ಬದುಕು ಸಾಗಿಸುವ ಕಾಲವನ್ನು ಮತ್ತೆ ಕಾಣಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಎಸ್.ಆರ್. ಪಾಟೀಲ, ಸಹಾಯಕ ಕೃಷಿ ನಿರ್ದೇಶಕ ಟಿ.ಎಚ್. ನಟರಾಜ, ತೋಟಗಾರಿಕೆ ಸಹಾಯಕ ನಿರ್ದೇಶಕ ಚಿದಾನಂದ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

