ಕನ್ನಡ ವಿಜ್ಞಾನ ಲೇಖಕರ ತರಬೇತಿ ಶಿಬಿರ
ಹಾವೇರಿ: ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಹಯೋಗದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರಿಗೆ, ಕಾರ್ಯನಿರತ ವಿಜ್ಞಾನ ಪತ್ರಿಕೋದ್ಯಮಿಗಳು, ವರದಿಗಾರರಿಗೆ ಜನಪ್ರಿಯ ವಿಜ್ಞಾನ ಬರವಣಿಗೆಯ ತರಬೇತಿ ಶಿಬಿರವನ್ನು ಹಮ್ಮಿಕೊಂಡಿದೆ.
ವಿಜ್ಞಾನ ಬರವಣಿಗೆಯಲ್ಲಿ ಆಸಕ್ತಿ ಇರುವ ವಿಜ್ಞಾನ ಶಿಕ್ಷಕರು, ಯುವ ಪತ್ರಿಕಾ ವರದಿಗಾರರು, ಚಿತ್ರ ನಿರೂಪಕರು, ರೇಡಿಯೋ ಭಾಷಣಕಾರರು ಶಿಬಿರದಲ್ಲಿ ಭಾಗವಹಿಸಬಹುದು. ಶಿಬಿರವು ಮಾ. 6ರಿಂದ 10 ರವರೆಗೆ ಗುಲ್ಬರ್ಗ ಜಿಲ್ಲೆಯ ಮರತೂರುರಿನ ವಿಜ್ಞಾನೇಶ್ವರ ಭವನದಲ್ಲಿ ಜರುಗುವುದು. ನುರಿತ ವಿಜ್ಞಾನ ಬರಹಗಾರರು, ಸಂವಹನಕಾರರಿಂದ ಶಿಬಿರಾರ್ಥಿಗಳಿಗೆ ವಿಜ್ಞಾನ ಬರವಣಿಗೆಯ ಕುರಿತ ವಿವಿಧ ಕೌಶಲ್ಯ, ಆಕರ, ಶಬ್ದ ಬಳಕೆ, ಅನುವಾದ, ವಿಜ್ಞಾನ ಪತ್ರಿಕೋದ್ಯಮ ಮುಂತಾದ ಅಂಶಗಳಲ್ಲಿ ತರಬೇತಿ ಒದಗಿಸಲಾಗುವುದು.
ಶಿಬಿರಾರ್ಥಿಗಳಾಗಿ ಭಾಗವಹಿಸಲು ಇಚ್ಛಿಸುವವರು ವಿಜ್ಞಾನ ಸಂವಹನದಲ್ಲಿ ವಿಶೇಷ ಆಸಕ್ತಿ ಹೊಂದಿರಬೇಕು, ವ್ಯಕ್ತಿ ವಿವರದೊಂದಿಗೆ ಈಗಾಗಲೇ ಒಂದು ಸ್ವ ರಚಿತ ಕನ್ನಡ ವೈಜ್ಞಾನಿಕ ಲೇಖನದ ಪ್ರತಿಯೊಂದಿಗೆ ಅರ್ಜಿಯನ್ನು ಡಾ. ವಸುಂಧರಾ ಭೂಪತಿ, ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಭವನ, ನಂ.24-2, 21ನೇ ಮುಖ್ಯರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು-560070 ಫೆ. 20 ರೊಳಗೆ ಸಲ್ಲಿಸಬೇಕು. ಕರಾವಿಪ ಸಂಘಟಿಸಿದ ಲೇಖಕರ ಶಿಬಿರಗಳಲ್ಲಿ ಈಗಾಗಲೇ ಭಾಗವಹಿಸಿದವರು ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ ನೋಂದಣಿ ಉಚಿತವಾಗಿದ್ದು, ಪರಿಷತ್ತು ಊಟೋಪಚಾರ, ವಾಸ್ತವ್ಯ, ಓಓಡಿ ಸೌಲಭ್ಯವನ್ನು ಕಲ್ಪಿಸಲಾಗುವುದು. 20ರಿಂದ 45 ವಯೋವಾನದವರಿಗೆ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪರಿಷತ್ತಿನ ಕಚೇರಿ ದೂ.ಸಂಖ್ಯೆ 080-26718938, 26718939 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

