ಹಾವೇರಿ

ಮಕ್ಕಳ ಅಭಿವೃದ್ಧಿ ಪೋಷಕರ ಜವಾಬ್ದಾರಿ

Published On :

ಹಿರೇಕೆರೂರು: ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರು ಹಾಗೂ ಪೋಷಕರು ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಸರ್ಕಾರದ ಯೋಜನೆಗಳ ಯಶಸ್ವಿಗೆ ಸಮುದಾಯ ಸಂಪೂರ್ಣವಾಗಿ ಪಾಲ್ಗೊಳ್ಳಬೇಕು, ಅಂದಾಗ ಮಾತ್ರ ಗ್ರಾಮಾಭಿವೃದ್ಧಿಯಾಗಲು ಸಾಧ್ಯ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಸರ್ಕಾರ ನೀಡಿದ ಉಚಿತ ಸೈಕಲ್ ವಿತರಿಸಿ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕಲ್ಪನೆಯು ಇಂದಿನ ಉದ್ಯೋಗ ಖಾತ್ರಿ ಯೋಜನೆಯ ದಿಟ್ಟ ನಿಲುವಾಗಿದೆ. ಈ ಯೋಜನೆಯ ಮೂಲಕ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳನ್ನು ಹಾಗೂ ಜಮೀನುಗಳಿಗೆ ತೆರಳಲು ನಮ್ಮ ಹೊಲ ನಮ್ಮ ರಸ್ತೆ ಕಾಮಗಾರಿ ಕೈಗೊಂಡು ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು. ಜಿಪಂ ಸದಸ್ಯೆ ಶಾಂತವ್ವ ಹಾದಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಸಿ. ಆನಂದ, ಗ್ರಾಪಂ ಸದಸ್ಯರಾದ ತಿಪ್ಪಣ್ಣ ಶಿವಪ್ಪನವರ, ಹನುಮಂತಪ್ಪ ಬೇವಿನಹಳ್ಳಿ, ಪರಮೇಶ ಹಲಗೇರಿ, ಶಿವಲಿಂಗಪ್ಪ ಮಲೆಬೆನ್ನೂರ, ಮಲ್ಲಿಕಾರ್ಜುನ ಮಕರಿ, ಪರಮೇಶಪ್ಪ ಹಳ್ಳಪನವರ, ದೇವೇಂದ್ರಪ್ಪ ಬಡಿಗೇರ, ಹನುಮಂತಪ್ಪ ಕುರುಬರ, ಶೀತವ್ವ ಮಾಳಗಿ, ಗಂಗವ್ವ ಬಡಿಗೇರ, ಶೋಭಾ ಹಲಗೇರಿ, ಗ್ರಾಮಸ್ಥರಾದ ಕೊಟ್ರಯ್ಯಮಠದ, ಸಂದೇಶ ಗೌಳೇರ, ಮಲ್ಲಪ್ಪ ಆಲದಕಟ್ಟಿ, ರುದ್ರಪ್ಪ ಬನ್ನಿಹಟ್ಟಿ, ರಾಜಪ್ಪ ಪೂಜಾರ, ಈರಪ್ಪ ಹೊಸಳ್ಳಿ  ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.