ಹಾವೇರಿ

ಅಂಗವಿಕಲರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

Published On :

ಹಾವೇರಿ: ಅಂಗವಿಕಲರ ರಿಯಾಯಿತಿ ಬಸ್‌ಪಾಸ್ ದರ ಕಡಿತಗೊಳಿಸಿ, ರಾಜ್ಯಾದ್ಯಂತ ಸಂಚರಿಸಲು ಅವಕಾಶ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ಅಂಗವಿಕಲರ ಸಂಘದ ಪದಾಧಿಕಾರಿಗಳು ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀಗೆ ಮನವಿ ಸಲ್ಲಿಸಿದರು. ಈ ವೇಳೆ ಅಂಗವಿಕಲರ ಸಂಘದ ಜಿಲ್ಲಾ ಅಧ್ಯಕ್ಷ ಪುಟ್ಟಪ್ಪ ಜಲದಿ ಮಾತನಾಡಿ, ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದೆ. ಇದರಿಂದ ವಿಕಲಚೇತನರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಆದ್ದರಿಂದ ಅನುಭವಿ ಅಂಗವಿಕಲರ ಕಲ್ಯಾಣಾಧಿಕಾರಿ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.
ಶೇ. 5ರಷ್ಟು ಮೀಸಲಾತಿಯನ್ನು ಶೇ. 10ಕ್ಕೆ ಏರಿಸಿ, ಕಡ್ಡಾಯವಾಗಿ ಅಂಗವಿಕಲರಿಗೆ ಆಶ್ರಯ ಮತ್ತು ಇಂದಿರಾ ಆವಾಸ ಯೋಜನೆ ಅಡಿ ಯಾವುದೇ ನಿರ್ಬಂಧವಿಲ್ಲದೇ, ಉಚಿತವಾಗಿ ನಿವೇಶನ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು. ಜಿಪಂ ಮತ್ತು ತಾಪಂ ಶೇ. 3ರಷ್ಟು ಅನುದಾನವನ್ನು ವಿಕಲಾಂಗರಿಗೆ ನೀಡುವಂತೆ ಪಂಚಾಯತ್ ರಾಜ್ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.
ತಮಿಳುನಾಡು ಮಾದರಿಯಂತೆ ಅಂಗವಿಕಲರಿಗೆ ಅಂತ್ಯೋದಯ ಪಡಿತರ ಚೀಟಿಯ ಜತೆಗೆ ಉಚಿತ ರೇಷನ್ ವಿತರಿಸಬೇಕು. ಚುನವಾಣೆ ಪ್ರಣಾಳಿಕೆಯಲ್ಲಿ ಘೋಷಿಸಿದ ತಿಂಗಳಿಗೆ ರು. 3 ಸಾವಿರ ಮಾಸಾಶನ ನೀಡಬೇಕು. ಪ್ರತಿ ತಿಂಗಳು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ಅಂಗವಿಕಲರ ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದು ಸೇರಿದಂತೆ ಇತ್ಯಾದಿ ಬೇಡಿಕೆಗಳನ್ನು ಒಳಗೊಂಡ ಮನವಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀಗೆಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.