ಸಹಕಾರಿ ಧುರೀಣ ಬಳ್ಳಾರಿ ಹುಟ್ಟುಹಬ್ಬ ಇಂದು
ಹಾನಗಲ್ಲ: ಹಾನಗಲ್ಲಿನ ರೈತ ಸಂಘಟಕ, ಸಹಕಾರಿ ಧುರೀಣ ಎ.ಎಸ್. ಬಳ್ಳಾರಿ ಅವರ 80ನೇ ಹುಟ್ಟುಹಬ್ಬವನ್ನು ಬಳ್ಳಾರಿ ಅವರ ಹುಟ್ಟುಹಬ್ಬ ಆಚರಣೆ ಸಮಿತಿ ಫೆ. 7ರಂದು ಆಯೋಜಿಸಿದ್ದು, ಹುಬ್ಬಳ್ಳಿ ಮೂರು ಸಾವಿರಮಠದ ಜಗದ್ಗುರು ಶ್ರೀ ಗುರುಸಿದ್ಧರಾಜಯೋಗೀಂದ್ರ ಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯಲಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಇಲ್ಲಿನ ಕುಮಾರೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮವನ್ನು ಮಾಜಿ ಸಚಿವ ಸಿ.ಎಂ. ಉದಾಸಿ ಉದ್ಘಾಟಿಸುವರು. ಹುಟ್ಟುಹಬ್ಬ ಆಚರಣೆ ಸಮಿತಿ ಗೌರವಾಧ್ಯಕ್ಷ, ಜನತಾ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಪಿ.ವೈ. ಗುಡಗುಡಿ ಅಧ್ಯಕ್ಷತೆ ವಹಿಸುವರು. ಸಂಸದ ಶಿವಕುಮಾರ ಉದಾಸಿ, ಹಾವೇರಿ ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯಾಧ್ಯಕ್ಷ ಪಿ.ಡಿ. ಶಿರೂರ ಅತಿಥಿಗಳಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

