ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ
ಹಾನಗಲ್ಲ: ಧರ್ಮ ಗುರುಗಳ ಸಮ್ಮುಖದಲ್ಲಿ ಒಳ್ಳೆಯ ಸಂಕಲ್ಪದೊಂದಿಗೆ ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯುವ ಮೂಲಕ ದುಂದು ವೆಚ್ಚಕ್ಕೆ ಕಡಿವಾಣ ಹಾಕಬೇಕು. ಹಣ, ಆಭರಣಗಳ ಆಡಂಬರದ ಮದುವೆಗಿಂತ ಅಂತರಂಗದ ಪ್ರೀತಿಯ ಮದುವೆ ಬೇಕು ಎಂದು ಸುತ್ತೂರು ಮಹಾಸಂಸ್ಥಾನಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ನುಡಿದರು.
ತಾಲೂಕಿನ ಬಮ್ಮನಹಳ್ಳಿ ಗ್ರಾಮದ ವಿರಕ್ತಮಠದ ಶಿವಯೋಗೀಶ್ವರ ಸ್ವಾಮಿಗಳ ಪಟ್ಟಾಧಿಕಾರದ 15ನೇ ವಾರ್ಷಿಕ ಮಹೋತ್ಸವದ ಅಂಗವಾಗಿ ನಡೆದ ಸಾಮೂಹಿಕ ವಿವಾಹ ಹಾಗೂ ಧರ್ಮ ಸಂದೇಶ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು. ನಮ್ಮ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯಗಳನ್ನು ಮುನ್ನಡೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿ ತಮ್ಮೆಲ್ಲರದ್ದಾಗಬೇಕು ಎಂದರು. ಹುಬ್ಬಳ್ಳಿ ಮೂರು ಸಾವಿರಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಹುಬ್ಬಳ್ಳಿ ಆರ್ಷ ವಿದ್ಯಾಕೇಂದ್ರದ ಚಿದ್ರೂಪಾನಂದ ಸರಸ್ವತಿ ಶ್ರೀಗಳು, ಬಮ್ಮನಹಳ್ಳಿ ವಿರಕ್ತಮಠದ ಶಿವಯೋಗೀಶ್ವರ ಶ್ರೀಗಳು, ಬೆಳಗಾವಿ ಮುಕ್ತಿಮಠದ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯರು, ಮಂಟೂರ ಅಡವಿಸಿದ್ಧೇಶ್ವರ ಮಠದ ಶಿವಲಿಂಗೇಶ್ವರ ಶ್ರೀಗಳು, ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮಿಗಳು, ಮುಧೋಳ ಗವಿಮಠದ ಜಗದ್ಗುರುಗಳು, ಹಿರೇಮಾಗಡಿಯ ಮುರುಘರಾಜೇಂದ್ರಮಠದ ಶಿವಮೂರ್ತಿ ಸ್ವಾಮಿಗಳು, ಅಕ್ಕಿಆಲೂರು ವಿರಕ್ತಮಠದ ಶಿವಬಸವ ಸ್ವಾಮಿಗಳು ಉಪಸ್ಥಿತರಿದ್ದರು. ಶ್ರೀಮಠದ ಭಕ್ತಿಗೀತೆಗಳ ಧ್ವನಿಸುರಳಿ ಬಿಡುಗಡೆ ಮಾಡಲಾಯಿತು. ಸಚಿವ ಪ್ರಕಾಶ ಹುಕ್ಕೇರಿ, ಶಾಸಕ ಮನೋಹರ ತಹಶೀಲ್ದಾರ, ಪದ್ಮನಾಭ ಕುಂದಾಪುರ, ಜಿ.ವಿ. ಕಂಬಾಳಿಮಠ, ಸೋಗಾಜಿ ಪುರೋಹಿತ, ಶಿವನಗೌಡ ಪಾಟೀಲ, ಎಂ.ಎಸ್. ಪಾಟೀಲ, ಲೋಕೇಶಪ್ಪ ಹೊಳಲದ, ಯಾಸೀರಖಾನ ಪಠಾಣ, ಅಣ್ಣ ಬಸವ ನೆಲವಗಿ, ಪ್ರಕಾಶ ಪುರೋಹಿತ, ವಿಷ್ಣುಕಾಂತ ಜಾಧವ, ಬಸವರಾಜ ಹಾದಿಮನಿ, ಕಲವೀರಪ್ಪ ಪವಾಡಿ ಮುಂತಾದವರು ಪಾಲ್ಗೊಂಡಿದ್ದರು. ಶಿವಾನಂದ ಕ್ಯಾಲಕೊಂಡ ಸ್ವಾಗತಿಸಿದರು. ಶಿವಪ್ರಕಾಶ ಬಳಿಗಾರ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

